ವೀರಶೈವ ಲಿಂಗಾಯತ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗಕ್ಕೆ ಅನುಕೂಲವಾಗಲೆಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆಯಲ್ಲಿ ನಡೆಸಿದ ಮಹಾ ಅಧಿವೇಶನ ಮೂಲಕ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿದೆ.
ದಾವಣಗೆರೆ / ಹರಿಹರ (ಜನವರಿ 16, 2024): ರಾಜ್ಯ ಸರ್ಕಾರವು ಯಾವುದೇ ರಾಜಕೀಯ ಮಾಡದೇ, ಸಕಲ ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು, ಶಿಫಾರಸ್ಸು ಮಾಡಲಿ. ವೀರಶೈವ ಲಿಂಗಾಯತ ಬೇರೆ ಬೇರೆಯಲ್ಲ ಎಲ್ಲರೂ ಒಂದೇ. ವೀರಶೈವ ಲಿಂಗಾಯತರು ಒಳ ಪಂಗಡಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು. ಎಲ್ಲರೂ ಒಂದೇ ಎಂಬುದನ್ನು ಮೊದಲು ಅರಿಯಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.
ವೀರಶೈವ ಲಿಂಗಾಯತ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗಕ್ಕೆ ಅನುಕೂಲವಾಗಲೆಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆಯಲ್ಲಿ ನಡೆಸಿದ ಮಹಾ ಅಧಿವೇಶನ ಮೂಲಕ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿದೆ. ಈಚೆಗೆ ಪಂಚಮಸಾಲಿ ಬಾಂಧವರೂ ಬೆಳವಣಿಗೆ ಹೊಂದುತ್ತಿರುವುದು ಆಶಾದಾಯಕ ಸಂಗತಿ ಎಂದು ಶ್ಲಾಘಿಸಿದರು.
ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ: ಶಾಸಕ ಬಿ.ಆರ್.ಪಾಟೀಲ್
ಶ್ರೀಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ರಾಜ್ಯಾಧ್ಯಕ್ಷ ಬಸವರಾಜ ದಿಂಡೂರು, ಎಸ್ಸೆಸ್ ಟ್ರಸ್ಟ್‌ನ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ, ರಾಣೆಬೆನ್ನೂರು ಮಾಜಿ ಶಾಸಕ ಅರುಣಕುಮಾರ ಪೂಜಾರ, ಪಿ.ಡಿ.ಶಿರೂರು, ಜ್ಯೋತಿ ಪ್ರಕಾಶ, ಚಂದ್ರಶೇಖರ ಪೂಜಾರ, ರಾಜಕುಮಾರ ಹೊನ್ನಾಳಿ, ಹಿರಿಯ ವಕೀಲರಾದ ಪ್ರಕಾಶ ಪಾಟೀಲ, ಬಸವರಾಜ ಉಚ್ಚಂಗಿದುರ್ಗ, ವಸಂತ ಹುಲ್ಲತ್ತಿ, ರಶ್ಮಿ ಕುಂಕದ್, ಡಿ.ಜೆ. ಶಿವಾನಂದಪ್ಪ, ಗುತ್ತೂರು ಹಾಲೇಶಗೌಡ, ಕಕ್ಕರಗೊಳ್ಳ ಮಂಜುನಾಥ ಪುರವಂತರ, ಕರಿಬಸಪ್ಪ ಕಂಚಿಕೇರಿ ಹರಿಹರ, ಕರಿಬಸಪ್ಪ ಗುತ್ತೂರು, ಬಾದಾಮಿ ಜಯಣ್ಣ, ಲಿಂಗಾರಾಜ್ ಪಟೇಲ್ ಬೆಳಕೇರಿ, ಶಿವಪ್ಪ ಬಂಕಾಪುರ, ಮಲ್ಲಿಕಾರ್ಜುನ, ಆಶೋಕ ಬೆಂಡಿಗೇರಿ, ಸೋಮಶೇಖರ್, ಬಾತಿ ರವಿಕುಮಾರ್, ಶ್ರೀಶೈಲ ಇತರರಿದ್ದರು.
ವೀರಶೈವ ಲಿಂಗಾಯತಕ್ಕೆ ಒಂದೇ ಮೀಸಲು ಬೇಕು: ವಚನಾನಂದ ಶ್ರೀ
ಸಮಸ್ತ ವೀರಶೈವ ಲಿಂಗಾಯತ ಸಮಾಜಕ್ಕೆ ಒಂದೇ ಮೀಸಲಾತಿ ಇರಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದರು.
ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಯಾರ ಮುಲಾಜಿಗೂ ಒಳಗಾಗಬಾರದು: ಎಚ್. ವಿಶ್ವನಾಥ್
ಹರಿಹರ ತಾಲೂಕು ಹನಗವಾಡಿ ಸಮೀಪದ ಪಂಚಮಸಾಲಿ ಪೀಠದಲ್ಲಿ ಸೋಮವಾರ ಹರಜಾತ್ರಾ ಮಹೋತ್ಸವ ಹಾಗೂ ಪೀಠಾರೋಹಣದ ವರ್ಷಾಚರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ವೀರಶೈವ ಲಿಂಗಾಯತರಲ್ಲಿ ಕೆಲವರು 2 ಎ, 3 ಎ, 2 ಬಿ ಹಾಗೂ ಕೆಲವರು ಎಸ್‌ಸಿ ಮೀಸಲಾತಿ ಪಡೆಯುತ್ತಿದ್ದಾರೆ ಎಂದರು.
ಮೀಸಲಾತಿಯು ನಮ್ಮ ಸಮುದಾಯಕ್ಕೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತಾಗಿದೆ. ನಾವು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸುತ್ತಿದ್ದೇವೆ. ನಮ್ಮ ಸಮಾಜದ 2 ಎ ಮೀಸಲಾತಿಗಾಗಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ವೈಜ್ಞಾನಿಕವಾಗಿ ಜಾತಿ ಸಮೀಕ್ಷೆ ಮಾಡಿ: ಶಾಸಕ ಶಾಮನೂರು ಶಿವಶಂಕರಪ್ಪ