ಗುರುರಾಘವೇಂದ್ರ ಬ್ಯಾಂಕ್‌ ಹಗರಣ: ಸಿಬಿಐಗೆ ಒಪ್ಪಿಸಲು ಶೀಘ್ರವೇ ಶಿಫಾರಸ್ಸು, ಎಸ್‌ಟಿಎಸ್‌

By Girish GoudarFirst Published Jan 17, 2023, 8:19 PM IST
Highlights

ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಸಿಬಿಐ ತನಿಖೆ ನಡೆಸಲು ಶಿಫಾರಸ್ಸು ಮಾಡಲಾಗುವುದು. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಎಸ್.ಟಿ. ಸೋಮಶೇಖರ್ 

ಬೆಂಗಳೂರು(ಜ.17): ಶ್ರೀ ಗುರುರಾಘವೇಂದ್ರ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳ ಅವ್ಯವಹಾರ ಪ್ರಕರಣವನ್ನ ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರದಿಂದ ಶೀಘ್ರವೇ ಶಿಫಾರಸ್ಸು ಮಾಡಲಿದೆ. ಹೌದು, ಈ ಸಂಬಂಧ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಇಂದು(ಮಂಗಳವಾರ) ನಡೆದ ಸಭೆಯಲ್ಲಿ ತಿರ್ಮಾನಿಸಲಾಗಿದೆ. 

ಶ್ರೀ ಗುರುರಾಘವೇಂದ್ರ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅವ್ಯವಹಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಸಿಬಿಐ ತನಿಖೆ ನಡೆಸಲು ಶಿಫಾರಸ್ಸು ಮಾಡಲಾಗುವುದು. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಸಚಿವ ಎಸ್.ಟಿ. ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ST Somashekar: ಶ್ರೀ ಗುರುರಾಘವೇಂದ್ರ ಬ್ಯಾಂಕ್‌ನಲ್ಲಿ ಅಕ್ರಮ ಎಸಗಿದವರ ಆಸ್ತಿ ಜಪ್ತಿ!

ಹಗರಣದ ತನಿಖೆ ಆರಂಭವಾಗಿ ಮೂರು ವರ್ಷವಾದರೂ ಸಾಲ ವಸೂಲಾತಿ ಆಗುತ್ತಿಲ್ಲ. ಸಭೆಗಳು ಮಾತ್ರ ನಡೆಯುತ್ತಿವೆಯೇ ಹೊರತು ಯಾವುದೇ ಫಲಿತಾಂಶ ಬರುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸಮಸ್ಯೆ ಏನು ಎಂದು ಆಡಳಿತಾಧಿಕಾರಿಯನ್ನು ಪ್ರಶ್ನಿಸಿದ ಸಚಿವರು, ಸರ್ಕಾರದ ಮೇಲೆ ಠೇವಣಿದಾರರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಠೇವಣಿದಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಪ್ರಕರಣವನ್ನು ಸಿಬಿಐಗೆ ವಹಿಸಲಾಗುವುದು. ಸಂಪುಟದಲ್ಲಿ ಈ ಕುರಿತು ಪ್ರಸ್ತಾವನೆ ಮಂಡಿಸಲಾಗುವುದು ಎಂದ ಸಚಿವ ಎಸ್. ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. 

click me!