ತುಮಕೂರು: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

By Kannadaprabha News  |  First Published Aug 9, 2019, 8:11 AM IST

ತುಮಕೂರಿನ ಪಾವಗಡ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಾವಗಡ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ತುಮಕೂರು(ಆ.09): ಪಾವಗಡ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕಿನ ಬಿ.ಅಚ್ಚಮ್ಮನಹಳ್ಳಿ-1, ಪಳವಳ್ಳಿ ತಾಂಡ ಕೇಂದ್ರಗಳಲ್ಲಿ ಪರಿಶಿಷ್ಟಜಾತಿ ಹಾಗೂ ಲಿಂಗದಹಳ್ಳಿ-1, ಕರೇಕ್ಯಾತನಹಳ್ಳಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ಹುದ್ದೆಗಳಿಗೆ ಸಾಮಾನ್ಯ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು.

Tap to resize

Latest Videos

undefined

ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆ, ಅರ್ಜಿ ಹಾಕಿ

ಸಿ.ಎನ್‌.ಹಳ್ಳಿ(ಪರಿಶಿಷ್ಟಜಾತಿ), ಆರ್‌.ಹೊಸಕೋಟೆ-2, ಪಳವಳ್ಳಿ-1, ವದನಕಲ್ಲು-1, ದ್ಯಾವಯ್ಯನಪಾಳ್ಯ, ಜಾಜುರಾಯನಹಳ್ಳಿ-2, ಹನುಮಸಾಗರ, ವಡ್ರೇವು ಹಾಗೂ ಶೈಲಾಪುರ-1 ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗಳಿಗೆ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಾವಗಡ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆಟೋಮೊಬೈಲ್‌ ಕ್ಷೇತ್ರದಲ್ಲಿ 3.5 ಲಕ್ಷ ಉದ್ಯೋಗ ಕಟ್!

click me!