ಭಾರೀ ಮಳೆ: ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ

By Web Desk  |  First Published Jul 20, 2019, 10:38 AM IST

ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೊಡಗಿನಲ್ಲಿಯೂ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್‌ ಘೋಷಿಸಲಾಗಿದೆ.


ಮಡಿಕೇರಿ(ಜು.20): ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಎಚ್ಚರಿಕೆಯಲ್ಲಿರುವಂತೆ ತಿಳಿಸಿದೆ.

"

Tap to resize

Latest Videos

ಜುಲೈ 20 ರಿಂದ 23 ರವರೆಗೆ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, 204.5 MM ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಎಚ್ಚರದಿಂದ ಇರಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಶಾಲಾ-ಕಾಲೇಜುಗಳಿಗೆ ರಜೆ

ಗುರುವಾರದಿಂದ ಸೋಮವಾರದವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಆರೆಂಜ್ ಅಲರ್ಟ್ ನಡುವೆ ಇದೀಗ ರೆಡ್ ಅಲರ್ಟ್ ಘೋಷಣೆಯಾಗಿದೆ.

ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 - 221077 ತುರ್ತು ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

click me!