ಆಪ್‌ನಿಂದ ಪ್ರಣಾಳಿಕೆಗಾಗಿ ಜನಾಭಿಪ್ರಾಯ ಸಂಗ್ರಹ

By Kannadaprabha News  |  First Published Mar 18, 2023, 5:53 AM IST

ಆಮ್‌ ಆದ್ಮಿ  ಆಮ್‌ ಆದ್ಮಿ ಪಕ್ಷದಿಂದ ಜನರಿಂದ ಜನರಿಗಾಗಿ ಪ್ರಣಾಳಿಕೆ ಸಿದ್ದಪಡಿಸಲು ರಾಜ್ಯಾದ್ಯಂತ ಜನಾಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಆಪ್‌ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಹೇಳಿದರು. ಪಕ್ಷದಿಂದ ಜನರಿಂದ ಜನರಿಗಾಗಿ ಪ್ರಣಾಳಿಕೆ ಸಿದ್ದಪಡಿಸಲು ರಾಜ್ಯಾದ್ಯಂತ ಜನಾಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಆಪ್‌ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಹೇಳಿದರು.


 ವಿಜಯಪುರ :  ಆಮ್‌ ಆದ್ಮಿ ಪಕ್ಷದಿಂದ ಜನರಿಂದ ಜನರಿಗಾಗಿ ಪ್ರಣಾಳಿಕೆ ಸಿದ್ದಪಡಿಸಲು ರಾಜ್ಯಾದ್ಯಂತ ಜನಾಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಆಪ್‌ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಹೇಳಿದರು.

ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಜನಾಭಿಪ್ರಾಯ ಸಂಗ್ರಹಿಸಿ ಜನಪರ ಪ್ರಣಾಳಿಕೆ ಸಿದ್ಧಪಡಿಸಲು ನಿಧÜರ್‍ರಿಸಲಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಜನರ ಅಭಿಪ್ರಾಯವನ್ನು ಸಂಗ್ರಹಿಸಿ, ಅವರಿಗೆ ಏನು ಅಗತ್ಯವಿದೆ ಎಂಬ ಮಾಹಿತಿ ಆಧರಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಹಲವು ಪಕ್ಷಗಳು ಕಾಟಾಚಾರಕ್ಕೆ ಎಂಬಂತೆ ಒಂದು ಸಂವಾದ ನಡೆಸಿ ಮಾಹಿತಿ ಸಂಗ್ರಹಿಸಿದ್ದೇವೆ ಎಂದು ಬಿಂಬಿಸಿಕೊಳ್ಳುತ್ತವೆ ಎಂದು ದೂರಿದರು.

Tap to resize

Latest Videos

ಮಾ.4ರಂದು ದಾವಣಗೆರೆಯಲ್ಲಿ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಅವರು ಕರ್ನಾಟಕದ ಜನತೆಗೆ ಗ್ಯಾರೆಂಟಿಗಳ ಮೊದಲ ಪಟ್ಟಿಯನ್ನು ಘೋಷಿಸಿದರು. ಅದರಲ್ಲಿ ಶೂನ್ಯ ಭ್ರಷ್ಟಾಚಾರ, 300 ಯೂನಿಟ್‌ ಉಚಿತ ವಿದ್ಯುತ್‌, ಯುವಜನತೆಗೆ ಖಚಿತ ಉದ್ಯೋಗ ಹಾಗೂ ಉದ್ಯೋಗ ಸಿಗುವ ತನಕ ತಿಂಗಳಿಗೆ .3000 ಉದ್ಯೋಗ ಭತ್ಯೆ ಸೇರಿದಂತೆ ಇತರೆ ಗ್ಯಾರಂಟಿ ನೀಡಲಾಗಿದೆ ಎಂದರು.

ಮಾ.18 ಮತ್ತು 19 ರಂದು ಪಕ್ಷದ ಕಾರ್ಯಾಧ್ಯಕ್ಷ, ಉಪ ಕಾರ್ಯಾಧ್ಯಕ್ಷರು, ಸ್ಪರ್ಧಾಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಅವರವರ ಕ್ಷೇತ್ರಗಳಲ್ಲಿ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಇದಕ್ಕಾಗಿ ಹಿಂದಿನ ಅಭಿಯಾನದಲ್ಲಿ ದೊರೆತ ಮಾಹಿತಿಯನ್ನು ಆಧರಿಸಿ 15 ಪ್ರಮುಖ ವಿಷಯಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಇವುಗಳ ಆಧಾರದಲ್ಲಿ ಜನರಿಂದ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈ ಮಾಹಿತಿಯನ್ನು ಆಧರಿಸಿ ನಾವು ಪ್ರಣಾಳಿಕೆ ಸಿದ್ಧಪಡಿಸುತ್ತೇವೆ ಎಂದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಧನರಾಜ ಬಸವಂತಿ, ಸೇವಾಕಾಂಕ್ಷಿಗಳಾದ ಮಲ್ಲಿಕಾರ್ಜುನ ಕೆಂಗನಾಳ, ಡಾ.ಬಿ.ಎಂ.ಬಿರಾದಾರ, ಮೊಹಮ್ಮದ್‌ ಯೂಸುಫ್‌ ಜಮಾದಾರ, ಅಪ್ಪನಗೌಡ ಪಾಟೀಲ, ಗುರು ಚವ್ಹಾಣ, ಶಬ್ಬೀರ ಪಟೇಲ್‌ ಬಿರಾದಾರ, ಅವಿನಾಶ ಐಹೊಳೆ ಇದ್ದರು.

ಶೂನ್ಯ ಕಮಿಷನ್ ಆಡಳಿತ ಬೇಕೆಂದರೆ ಆಪ್ ಗೆಲ್ಲಿಸಿ

ದಾವಣಗೆರೆ (ಮಾ.05): ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ ಕಣಕ್ಕೆ ದೆಹಲಿ ಮುಖ್ಯಮಂತ್ರಿ, ಆಪ್‌ನ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರ ರಂಗಪ್ರವೇಶವಾಗಿದೆ. ಶನಿವಾರ ನಗರದಲ್ಲಿ ನಡೆದ ಆಮ್‌ ಆದ್ಮಿ ಪಕ್ಷದ ರಾಜ್ಯ ಸಮಾವೇಶಕ್ಕೆ ವಿಧ್ಯುಕ್ತ ಚಾಲನೆ ನೀಡಿ ಡಬಲ್‌ ಇಂಜಿನ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಲ್ಲಿನ ಹೈಸ್ಕೂಲ್‌ ಮೈದಾನದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆಂದಿದ್ದ ಬಿಜೆಪಿಯವರ ಆಳ್ವಿಕೆ ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿದೆ. ನಮ್ಮದು ಶೂನ್ಯ ಭ್ರಷ್ಟಾಚಾರ ಸರ್ಕಾರ. ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡುವ ಮಾತನ್ನು ನಾವು ನೀಡುತ್ತೇವೆ. ಶೂನ್ಯ ಕಮಿಷನ್‌ ಸರ್ಕಾರ ನೀಡಲು ಆಪ್‌ಗೆ ಮತ ನೀಡಿ ಎಂದರು.

ಭಗವಂತ ಸಿಂಗ್‌ ಮಾನ್‌ ಅವರು ತಮ್ಮ ಸಂಪುಟದ ಓರ್ವ ಸಚಿವ, ಒಬ್ಬ ಶಾಸಕ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದ್ದಂತೆ ಅವರನ್ನು ಜೈಲಿಗೆ ತಳ್ಳಿದರು. ಇನ್ನು, ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಬಿಜೆಪಿ ಸರ್ಕಾರದಲ್ಲಿ ಶೇ.40 ಕಮೀಷನ್‌ ದಂಧೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ನಿರಂತರ ಪತ್ರ ಬರೆದರೂ 2 ವರ್ಷದಿಂದಲೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದೇ ಬಿಜೆಪಿ ಮುಖಂಡ, ಗುತ್ತಿಗೆದಾರ ಸಂತೋಷ್‌ ಪಾಟೀಲ ಸಚಿವರೊಬ್ಬರ ಕಮೀಷನ್‌ ದಾಹದಿಂದ ನೊಂದು ಆತ್ಮಹತ್ಯೆಯನ್ನೇ ಮಾಡಿಕೊಂಡ. ನಾಚಿಕೆ ಆಗಬೇಕು ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಎಂದು ಕೇಜ್ರಿವಾಲ್‌ ಕುಟುಕಿದರು.

ಬಹುಮತದೊಡನೆ ಬಿಜೆಪಿ ಮತ್ತೆ ಅಧಿಕಾರಕ್ಕೆ: ಕೆ.ಎಸ್‌.ಈಶ್ವರಪ್ಪ

3 ಕೋಟಿ ಸಾಲವಿದ್ದರೂ ಉಚಿತ ಸೌಲಭ್ಯ ಯಾಕಿಲ್ಲ?: ದೆಹಲಿಯಲ್ಲಿ ಉಚಿತವಾಗಿ ನೀರು, ವಿದ್ಯುತ್‌, ಶಿಕ್ಷಣ, ಆರೋಗ್ಯ, ಶಸ್ತ್ರಚಿಕಿತ್ಸೆ ಉಚಿತವಾಗಿ ನೀಡುತ್ತಿದ್ದೇವೆ. ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದೇವೆ. ಕರ್ನಾಟಕದ್ದು 3 ಲಕ್ಷ ಕೋಟಿ ಸಾಲ ಇದ್ದರೂ, ಉಚಿತ ಸೌಲಭ್ಯವಿಲ್ಲ. ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಸಮವಸ್ತ್ರ, ಶೂಸ್‌, ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ಆರೈಕೆ, ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದೇವೆ. ಪಂಜಾಬ್‌ನಲ್ಲಿ ಬಲವಂತ್‌ ಸಿಂಗ್‌ ಮಾನ್‌ ನೇತೃತ್ವದ ಆಮ್‌ ಆದ್ಮಿ ಸರ್ಕಾರ 27 ಸಾವಿರ ಹುದ್ದೆಗೆ ಯುವ ಜನರನ್ನು ನೇಮಿಸಿದೆ. ದೆಹಲಿಯ ಲ್ಲೂ ಖಾಲಿ ಹುದ್ದೆ ಭರ್ತಿ ಮಾಡಿಕೊಂಡಿದ್ದೇವೆ ಎಂದು ಆಪ್‌ ನೇತೃತ್ವದ ಸರ್ಕಾರದ ಕುರಿತು ಕೇಜ್ರಿವಾಲ ಹೇಳಿದರು.

click me!