ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ 2000 ರು.

By Kannadaprabha News  |  First Published Apr 19, 2020, 10:09 AM IST

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ 2 ಸಾವಿರ ರು. ಜಮೆ ಮಾಡಲಾಗುತ್ತಿದೆ.


ಮಡಿಕೇರಿ(ಏ.19): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ 2 ಸಾವಿರ ರು. ಜಮೆ ಮಾಡಲಾಗುತ್ತಿದೆ.

ಆದ್ದರಿಂದ ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಹೆಸರನ್ನು ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ಪಡೆದ ನೋಂದಾಯಿತ ಗುರುತಿನ ಚೀಟಿ ಪ್ರತಿ, ಆಧಾರ್‌ ಕಾರ್ಡ್‌ ಪ್ರತಿ ಹಾಗೂ ಬ್ಯಾಂಕ್‌ ಪಾಸ್‌ಪುಸ್ತಕ ಪ್ರತಿಯನ್ನು ಸಾಧ್ಯವಾದಷ್ಟು ಬೇಗ ತಾಲೂಕಿನಲ್ಲಿರುವ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ಜಿಲ್ಲೆಯ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿ ರಾಮಕೃಷ್ಣ ಕೋರಿದ್ದಾರೆ.

Tap to resize

Latest Videos

ಗದಗನಲ್ಲಿ 3ನೇ ಕೊರೋನಾ ಪ್ರಕರಣ: ಜಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌-19 ಟೆಸ್ಟ್‌ ಆರಂಭ

ಲಾಕ್‌ಡೌನ್‌ನಿಂದಾಗಿ ಜನರು ಈಗಾಗಲೇ ಸಂಕಷ್ಟದಲ್ಲಿದ್ದು, ದಿನ ಬಳಕೆ ಸಾಮಾಗ್ರಿಗಳಿಗಾಗಿ, ಅಗತ್ಯಗಳಿಗಾಗಿ ಕಷ್ಟಪಡುವಂತಾಗಿದೆ. ದಿನಗೂಲಿ ಕಾರ್ಮಿಕರಂತೂ ಆದಾಯವಿಲ್ಲದೆ ಪರದಾಡುವಂತಾಗಿದೆ.

click me!