ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಖರೀದಿಗೆ ಡಿ.15 ರಿಂದ ನೋಂದಣಿ

By Kannadaprabha News  |  First Published Dec 9, 2022, 6:17 AM IST

ಕೇಂದ್ರ ಸರ್ಕಾರವು 2022-23 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು ಡಿ.15 ರಿಂದ ನೋಂದಣಿ ಆರಂಭವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.


 ಮೈಸೂರು (ಡೊ. 09): ಕೇಂದ್ರ ಸರ್ಕಾರವು 2022-23 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು ಡಿ.15 ರಿಂದ ನೋಂದಣಿ ಆರಂಭವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ (Price) ಯೋಜನೆಯ ಟಾಸ್‌್ಕ ಪೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ಮತ್ತು ರಾಗಿ (Millet)  ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಿಸಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ ಎಂದರು.

Latest Videos

undefined

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿ.15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾಚ್‌ರ್‍ 31 ರವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಓರ್ವ ಬೆಳಗಾರರಿಂದ ಗರಿಷÜ್ಠ 40 ಕ್ವಿಂಟಾಲ್‌ ಭತ್ತ ಹಾಗೂ ರಾಗಿ ಕನಿಷ್ಠ 10 ರಿಂದ ಗರಿಷ್ಠ 20 ಕ್ವಿಂಟಾಲ್‌ ಖರೀದಿಸಲಾಗುವುದು ಎಂದು ಅವರು ಹೇಳಿದರು.

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ . 2040 ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಾಲ್‌ಗೆ . 3578 ನಿಗದಿಪಡಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 14 ಕಡೆಗಳಲ್ಲಿ ಮೈಸೂರಿನ ಎಪಿಎಂಸಿ ಆವರಣ, ಬಂಡಿಪಾಳ್ಯ, ನಂಜನಗೂಡಿನ ಎಪಿಎಂಸಿ ಆವರಣ, ಬಿಳಿಗೆರೆ ಖರೀದಿ ಕೇಂದ್ರ, ಟಿ. ನರಸೀಪುರದ ಎಪಿಎಂಸಿ ಆವರಣ, ಬನ್ನೂರು ಎಪಿಎಂಸಿ ಆವರಣ, ಹುಣಸೂರು, ರತ್ನಪುರಿ ಎಂಪಿಎಂಸಿ ಆವರಣ, ಕೆ.ಆರ್‌. ನಗರದ ಚುಂಚನಕಟ್ಟೆಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ), ಸಾಲಿಗ್ರಾಮ, ಎಚ್‌.ಡಿ. ಕೋಟೆ ಎಪಿಎಂಸಿ, ಸರಗೂರು ಮತ್ತು ಪಿರಿಯಾಪಟ್ಟಣ, ಬೆಟ್ಟದಪುರ ಎಪಿಎಂಸಿ ಆವರಣದಲ್ಲಿ ಖರೀದಿ ಮಾಡಲಾಗುವುದು ಎಂದು ಅವರು ವಿವರಿಸಿದರು.

ಆದರೆ, ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಅವರು ಸೂಚನೆ ನೀಡಿದರು.

ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುತ್ತದೆ. ನೊಂದಣಿ ಕೇಂದ್ರದಲ್ಲಿ ರೈತರು ಪ್ರೂಟ್‌ ಐಡಿ, ಆಧಾರ್‌ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್‌ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ಅವರು ತಿಳಿಸಿದರು.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಅವರು ಹೇಳಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್‌, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಎಂ ಪುಷÜ್ಪ ಮೊದಲಾದವರು ಇದ್ದರು.

click me!