ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ತನ್ನ ಒಡಲಲ್ಲಿ ಸಾವಿರಾರು ಔಷಧ ಗುಣವುಳ್ಳ ಸಸ್ಯ ಸಂಪತ್ತು ಹೊಂದಿದೆ. ಇದನ್ನು ಸಂರಕ್ಷಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದ ಸಭಾಪತಿ ಬಸವರಾಜ ಹೊರಟ್ಟಿ
ಗದಗ(ಅ.27): ಕಪ್ಪತ್ತಗುಡ್ಡದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಆರಂಭಿಸಲು ಬಂದ ಪ್ರಸ್ತಾವನೆವನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ತನ್ನ ಒಡಲಲ್ಲಿ ಸಾವಿರಾರು ಔಷಧ ಗುಣವುಳ್ಳ ಸಸ್ಯ ಸಂಪತ್ತು ಹೊಂದಿದೆ. ಇದನ್ನು ಸಂರಕ್ಷಿಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದ್ದಾರೆ.
ಕಪ್ಪತ್ತಗುಡ್ಡ ಸಂರಕ್ಷಣೆಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ನಡೆಸದಂತೆ ಮಠಾಧೀಶರು, ಪರಿಸರ ಹೋರಾಟಗಾರರು ಒತ್ತಾಯಿಸುತ್ತಾ ಬಂದಿದ್ದಾರೆ. ಆದಾಗ್ಯೂ ಗಣಿಗಾರಿಕೆಗಾಗಿ ಉದ್ಯಮಿಗಳು ತಮ್ಮ ಪ್ರಯತ್ನ ಬಿಟ್ಟಿಲ್ಲ. ಗಣಿಗಾರಿಕೆ ಆರಂಭಿಸಲು 28 ಪ್ರಸ್ತಾವನೆಗಳು ಸರ್ಕಾರದ ಮುಂದೆ ಬಂದಿದ್ದವು.
ಮಳೆ ಕೊರತೆ: ಕಪ್ಪತ್ತಗುಡ್ಡದಲ್ಲಿ ಕುಡಿವ ನೀರಿಗಾಗಿ ಪರಿತಪಿಸುತ್ತಿರುವ ಪ್ರಾಣಿಗಳು !
15 ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನ ಮುಂದೂಡಿರುವುದು ಸ್ವಲ್ಪ ಸಮಾಧಾನ ತಂದಿದೆ. ಆದರೆ ಈ ಪ್ರಸ್ತಾವನೆಯನ್ನು ಸಂಪೂರ್ಣ ತಿರ ಸ್ಕರಿಸಿ, ಈ ಭಾಗದಲ್ಲಿ ಯಾವುದೇ ಗಣಿಗಾರಿಕೆ ಹಾಗೂ ಇತರ ಉದ್ಯಮ ಆರಂಭಿಸಲು ಅನುಮತಿ ನೀಡುವುದಿಲ್ಲವೆಂದು ಆದೇಶ ಹೊರಡಿಸಬೇಕಾಗಿತ್ತು.
ಕೇವಲ ಪ್ರಸ್ತಾವನೆ ದೂಡಿರುವುದರಿಂದ ಉತ್ತರ ಕರ್ನಾಟಕ ಜನರಿಗೆ ಹಾಗೂಪರಿಸರಸಂರಕ್ಷಣೆ ಪರಹೋರಾಟಗಾರರಿಗೆ ಸಂಶಯ ಮೂಡುವ ಜತೆಗೆ ಸರ್ಕಾರದ ಮೇಲೆ ನಂಬಿಕೆ ಇಲ್ಲದಂತಾಗಿದೆ ಎಂದಿದ್ದಾರೆ. ಕಪ್ಪತ್ತಗುಡ್ಡ ವನ್ನು ಸೂಕ್ಷ್ಮವಲಯ ವ್ಯಾಪ್ತಿಯೆಂದು ಸದಾ ಸರ್ಕಾರ ಹೇಳಿಕೊಂಡು ಬಂದಿದೆ. ಈ ಕುರಿತು ಆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸದಂತೆ ಸ್ಪಷ್ಟ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.