ನಿಲ್ಲದ ಕೊರೋನಾ ಕೇಸ್‌: ಯಾದಗಿರಿ ಜಿಲ್ಲೆಯ ಜನತೆಗೆ ದೇವರ ದರ್ಶನ ಭಾಗ್ಯ ಇಲ್ಲ..!

By Kannadaprabha News  |  First Published Jun 8, 2020, 10:15 AM IST

ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶ, ಯಾದಗಿರಿ ಜಿಲ್ಲೆಯಲ್ಲಿ 2 ವಾರ ಮುಂದೂಡಿಕೆ| ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ನೀಡಿರುವ ಸಲಹೆ ಮೇರೆಗೆ ನಿರ್ಧಾರ| 


ಯಾದಗಿರಿ(ಜೂ.08): ಜಿಲ್ಲೆಯಲ್ಲಿ ಕೋವಿಡ್-19 ಸಕಾರಾತ್ಮಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಈಗಾಗಲೇ 15 ಕ್ಕಿಂತ ಹೆಚ್ಚು ನಿಯಂತ್ರಿತ ವಲಯಗಳ ಅಧಿಸೂಚನೆ ಹೊರಡಿಸಿರುವುದರಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ಎರಡು ವಾರಗಳವರೆಗೆ ಮುಂದೂಡಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕಾಗಿ ಜೂನ್ 8 ರಿಂದ(ಇಂದಿನಿಂದ)ಅನುಮತಿಸಲಾಗಿತ್ತು. ಆದರೆ, ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸಕಾರಾತ್ಮಕ (ಪಾಸಿಟಿವ್) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ಎರಡು ವಾರಗಳವರೆಗೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ. 

Tap to resize

Latest Videos

undefined

ಶಹಾಪುರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ಗೆ ಕೊರೋನಾ ಸೋಂಕು: ಹೆಚ್ಚಿದ ಆತಂಕ

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ನೀಡಿರುವ ಸಲಹೆ ಮೇರೆಗೆ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ಮುಂದಿನ ಎರಡು ವಾರಗಳವರೆಗೆ ಮುಂದೂಡಲಾಗಿದೆ ಎಂದು ಡಿಸಿ ಎಂ.ಕೂರ್ಮಾರಾವ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

click me!