: ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಮಾ.5ರಂದು ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಹಾಗೂ ರೇಣುಕಾಚಾರ್ಯ ಜಯಂತಿ ನಡೆಯಲಿದೆ.
ಬಾಳೆಹೊನ್ನೂರು (ಮಾ.5) : ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಮಾ.5ರಂದು ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಹಾಗೂ ರೇಣುಕಾಚಾರ್ಯ ಜಯಂತಿ(Renukacharya jayanti) ನಡೆಯಲಿದೆ.
ಭಾನುವಾರ ಬೆಳಿಗ್ಗೆ 11ಕ್ಕೆ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yadiyurappa) ಅವರಿಗೆ ಶ್ರೀ ಪೀಠದ ಪ್ರತಿಷ್ಠಿತ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ(Renukacharya award) ಪ್ರದಾನ ಮಾಡಲಾಗುವುದು.
ಮಾಡಾಳ್ ಕೇಸ್‌ನಲ್ಲಿ ಸರ್ಕಾರ ಮೂಗು ತೂರಿಸಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ(Pralhad joshi) ರಂಭಾಪುರಿ ಬೆಳಗು(Rambhapuri belagu) ಕೃತಿ ಬಿಡುಗಡೆ(inauguration) ಮಾಡಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ(BY Raghavendra), ಸಚಿವ ಸಿ.ಸಿ.ಪಾಟೀಲ(CC patil), ವಿ. ಸುನೀಲ್‌ಕುಮಾರ್(V Sunil kumar), ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕ ಸಿ.ಟಿ.ರವಿ, ಟಿ.ಡಿ.ರಾಜೇಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಪ್ರಮುಖರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬಸಯ್ಯ ಕಾಡಯ್ಯ ಹಿರೇಮಠ, ಡಾ.ಕೃಷ್ಣಾರೆಡ್ಡಿ, ಸಿ.ಮೃತ್ಯುಂಜಯ ಸ್ವಾಮಿ, ಮಲ್ಲಿಕಾರ್ಜುನ ಬಿ.ಗುಂಗೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಗಣ್ಯರಿಗೆ ಗೌರವ ಗುರುರಕ್ಷೆ ನೀಡಲಾಗುವುದು. ಸಮಾರಂಭಕ್ಕೂ ಮುನ್ನ ಶ್ರೀಪೀಠದಲ್ಲಿ ನಿರ್ಮಾಣಗೊಳ್ಳಲಿರುವ 51ಅಡಿ ಎತ್ತರ ದ ರೇಣುಕಾಚಾರ್ಯ ಮಂಗಲಮೂರ್ತಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇರವೇರಿಸಲಿದ್ದಾರೆ. ಇಲ್ಲಿನ ಮೂಲಪೀಠದ ನವೀಕರಣ ಶಿಲಾನ್ಯಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇರವೇರಿಸಲಿದ್ದಾರೆ. ಶ್ರೀ ಪೀಠದ ಮುಂಭಾಗ ನಿರ್ಮಾಣ ಮಾಡಿರುವ ನೂತನ ಕಾಂಕ್ರೀಟ್ ರಸ್ತೆಯನ್ನು ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ.
ಸಂವಿಧಾನದ ಆಶಯವನ್ನ ಜೆಡಿಎಸ್ ಪಕ್ಷ ತಪ್ಪಾಗಿ ಅರ್ಥೈಸಿಕೊಂಡಿದೆ: ಸಿ.ಟಿ.ರವಿ ಲೇವಡಿ
ಸಮಾರಂಭದ ನಂತರ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ರಾತ್ರಿ 8.30ಕ್ಕೆ ಗದಗದ ಗುರುಸ್ವಾಮಿ ಕಲಕೇರಿ ಅವರಿಂದ ಗಾನ ತರಂಗ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ.