ರೇಣುಕಾಸ್ವಾಮಿ ಕೊಲೆ ಕೇಸ್‌: ಬಂಧನಕ್ಕೊಳಗಾದ 103 ದಿನಗಳ ಬಳಿಕ ಜಾಮೀನಿಗೆ ದರ್ಶನ್‌ ಅರ್ಜಿ

Published : Sep 22, 2024, 07:06 AM IST
ರೇಣುಕಾಸ್ವಾಮಿ ಕೊಲೆ ಕೇಸ್‌: ಬಂಧನಕ್ಕೊಳಗಾದ 103 ದಿನಗಳ ಬಳಿಕ ಜಾಮೀನಿಗೆ ದರ್ಶನ್‌ ಅರ್ಜಿ

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 3991 ಪುಟಗಳ ದೋಷಾರೋಪಣ ಪಟ್ಟಿಯನ್ನು ಸೆ. 4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ 18 ದಿನಗಳ ಬಳಿಕ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದೋಷಾರೋಪಣೆ ಪಟ್ಟಿ ಸಲ್ಲಿಕೆಗೂ ಮೊದಲು ಪವಿತ್ರಾಗೌಡ ಸೇರಿ ಇತರರು ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು.

ಬೆಂಗಳೂರು(ಸೆ.22):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 

ದರ್ಶನ್‌ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ನೀಡಿದ ನ್ಯಾಯಾಲಯ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್‌ ಪರ ವಕೀಲ ಎಸ್‌.ಸುನೀಲ್‌ ಕುಮಾರ್‌ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದರು.  ನ್ಯಾಯಾಧೀಶ ಜಯಶಂಕರ್‌ ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಿ ಸೆ.23ಕ್ಕೆ ವಿಚಾರಣೆ ಮುಂದೂಡಿದರು. 

ನಟ ದರ್ಶನ್ ಭೇಟಿಯಾದ ತಾಯಿ ಮೀನಾ ತೂಗುದೀಪ: ಜೈಲಲ್ಲಿ ಮಗನ ಸ್ಥಿತಿ ಕಂಡು ಕಣ್ಣೀರಿಟ್ಟ ಹೆತ್ತವ್ವ..!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 3991 ಪುಟಗಳ ದೋಷಾರೋಪಣ ಪಟ್ಟಿಯನ್ನು ಸೆ. 4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ 18 ದಿನಗಳ ಬಳಿಕ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದೋಷಾರೋಪಣೆ ಪಟ್ಟಿ ಸಲ್ಲಿಕೆಗೂ ಮೊದಲು ಪವಿತ್ರಾಗೌಡ ಸೇರಿ ಇತರರು ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ