ನಗರದಲ್ಲಿ ಆಂಗ್ಲ ಭಾಷೆಯಲ್ಲಿರುವ ನಾಮಫಲಕ ತೆರವುಗೊಳಿಸಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಡಿಪಿಕೆ ಪರಮೇಶ್ ಆಗ್ರಹಿಸಿದರು. ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವಿಗಾಗಿ ನಗರ ಪಾಲಿಕೆ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದರೂ ನಿರ್ಲಕ್ಷಿಸಿರುವ ಕಾರಣ ಒಂದು ವಾರ ಗಡುವು ನೀಡಿದ್ದು, ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ, ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎದುರು ಕಪ್ಪು ಪಟ್ಟಿಧರಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ಮೈಸೂರು : ನಗರದಲ್ಲಿ ಆಂಗ್ಲ ಭಾಷೆಯಲ್ಲಿರುವ ನಾಮಫಲಕ ತೆರವುಗೊಳಿಸಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಡಿಪಿಕೆ ಪರಮೇಶ್ ಆಗ್ರಹಿಸಿದರು. ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವಿಗಾಗಿ ನಗರ ಪಾಲಿಕೆ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದರೂ ನಿರ್ಲಕ್ಷಿಸಿರುವ ಕಾರಣ ಒಂದು ವಾರ ಗಡುವು ನೀಡಿದ್ದು, ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ, ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎದುರು ಕಪ್ಪು ಪಟ್ಟಿಧರಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ಅಂಜಣಾದ್ರಿಯಲ್ಲಿ ಹಾಕಿದ್ದ ನಾಮಪಲಕ ತೆರವು
undefined
ಗಂಗಾವತಿ(ನ.30): ತಾಲೂಕಿನ ಅಂಜನಾದ್ರಿ ಬೆಟ್ಟದ ಕೆಳಗೆ ಮತ್ತು ರಸ್ತೆಯ ಅಕ್ಕಪಕ್ಕ ಹಿಂದೂ ಜಾಗರಣ ವೇದಿಕೆಯವರು ಅಳವಡಿಸಿದ್ದ ‘ಅನ್ಯಮತೀಯರಿಗೆ ವ್ಯಾಪಾರ ನಿಷೇಧ’ ಎನ್ನುವ ನಾಮಫಲಕವನ್ನು ತಾಲೂಕು ಆಡಳಿತ ಮಂಗಳವಾರ ತೆರವುಗೊಳಿಸಿದೆ. ಡಿ. 3ರಿರಂದ 5ರ ವರೆಗೆ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ಕಳೆದ ಎರಡು ದಿನಗಳ ಹಿಂದೆ ಹಿಂದೂ ಜಾಗರಣ ವೇದಿಕೆಯವರು ನಾಮಫಲಕ ಹಾಕಿದ್ದರು. ಅಲ್ಲದೆ ಅನ್ಯಮತೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂದು ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಿದ್ದರು.
ಇದರಿಂದ ಎಚ್ಚೆತ್ತ ತಾಲೂಕು ಆಡಳಿತವು ಮಂಗಳವಾರ ಪೊಲೀಸ್ ಇಲಾಖೆ, ಆನೆಗೊಂದಿ ಗ್ರಾಮ ಪಂಚಾಯಿತಿಯವರ ನೇತೃತ್ವದಲ್ಲಿ ನಾಮಫಲಕವನ್ನು ತೆರವುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ನಾಗರಾಜ ಅವರು, ಪಟ್ಟಾಭೂಮಿಯಲ್ಲಿ ವ್ಯಾಪಾರಿಗಳು ಇದ್ದಾರೆ. ಅವರು ನಮಗೆ ಸಂಬಂಧ ಇಲ್ಲ. ದೇವಸ್ಥಾನದ ವ್ಯಾಪ್ತಿಯಲ್ಲಿ ಅಂಗಡಿಗಳು ಇಲ್ಲ. ಅನ್ಯ ಮತೀಯರ ಅಂಗಡಿಗಳು ಹಾಕುವುದು, ಬಿಡುವುದು ಹೊಲದ ಮಾಲೀಕರಿಗೆ ಬಿಟ್ಟ ವಿಷಯವಾಗಿದೆ. ದೇವಸ್ಥಾನ ಮತ್ತು ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಯಾರೂ ಅಂಗಡಿಗಳನ್ನು ಹಾಕಿಲ್ಲ. ಅಲ್ಲದೇ ಮತೀಯ ಗಲಭೆಯಾಗಬಾರದೆಂಬ ಕಾರಣಕ್ಕೆ ನಾಮಫಲಕಗಳನ್ನು ತೆರವುಗೊಳಿಸಲಾಗಿದೆ ಎಂದರು.
ಶಾಂತಿ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿಗಾ ವಹಿಸುತ್ತದೆ ಎಂದರು.
ಧರ್ಮದಂಗಲ್ ವೇದಿಕೆಯಾಗುವುದೇ ಆಂಜನೇಯನ ಜನ್ಮಸ್ಥಳ ಅಂಜನಾದ್ರಿ?
ತೆರವು ಸಂದರ್ಭದಲ್ಲಿ ತಹಸೀಲ್ದಾರ್ ನಾಗರಾಜ್, ತಾಲೂಕು ಪಂಚಾಯಿತಿ ಇಒ ಮಹಾಂತಗೌಡ, ಆನೆಗೊಂದಿ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಪ್ಪ, ಸಿಪಿಐ ಮಂಜುನಾಥ ಇದ್ದರು
ವಿವಾದಿತ ನಾಮಫಲಕ ತೆರವು
ಭಟ್ಕಳ(ಜು.01): ಭಾರೀ ವಿವಾದಕ್ಕೆ ಕಾರಣವಾಗಿದ್ದ ಭಟ್ಕಳ ಪುರಸಭೆಯ ನಾಮಫಲಕದ ಉರ್ದು ಅಕ್ಷರವನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ಗುರುವಾರ ಮಧ್ಯಾಹ್ನ ಪುರಸಭೆಯಿಂದ ತೆರವುಗೊಳಿಸಲಾಯಿತು.
ಹೀಗಾಗಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ನಾಮಫಲಕದ ಉರ್ದು ಅಕ್ಷರ ಬರೆಯಿಸಿದ ವಿವಾದಕ್ಕೆ ತೆರೆ ಬಿದ್ದಂತಾಗಿದೆ. ಗುರುವಾರ ಬೆಳಗ್ಗೆಯೇ ಭಟ್ಕಳಕ್ಕಾಗಮಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ ಅವರು ಎಸಿ ಕಚೇರಿಯಲ್ಲಿ ಪುರಸಭೆಯ ಅಧ್ಯಕ್ಷರು,ಸದಸ್ಯರು ಹಾಗೂ ತಂಝೀಂ ಮುಖಂಡರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಸರ್ಕಾರದ ನಿಯಮದಂತೆ ಸರ್ಕಾರಿ ಕಚೇರಿಗಳಲ್ಲಿ ಕನ್ನಡ,ಇಂಗ್ಲಿಷ್ ಭಾಷೆಯ ಅಕ್ಷರಗಳನ್ನು ಬಿಟ್ಟು ಬೇರೆ ಯಾವುದೇ ಭಾಷೆಯ ಅಕ್ಷರಗಳನ್ನು ಬರೆಯಿಸಲು ಅವಕಾಶವಿಲ್ಲ ಎಂದು ಮನದಟ್ಟು ಮಾಡಿದ್ದಲ್ಲದೇ ಪುರಸಭೆಯ ನಾಮಫಲಕದಲ್ಲಿ ಬರೆಯಿಸಲಾದ ಉರ್ದು ಅಕ್ಷರವನ್ನು ತೆರವುಗೊಳಿಸಲೇಬೇಕೆಂದು ಹೇಳಿದರು.
KONKANI SIGN BOARD CONTROVERSY; ಕೊಂಕಣಿ ಬೋರ್ಡ್ ವಿವಾದ ಹುಟ್ಟು ಹಾಕಿದ ಕಾರವಾರ ನಗರಸಭೆ!
ಅದಲ್ಲದೇ ಸಭೆಯ ಬಳಿಕ ಕಲಬುರ್ಗಿ ಮಹಾನಗರ ಪಾಲಿಕೆಯ ನಾಮಫಲಕದ ತೆರವು ಆದೇಶದ ಸರ್ಕಾರದ ಆದೇಶವನ್ನು ಪ್ರಸ್ತಾಪಿಸಿ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಅವರಿಗೆ ಪುರಸಭೆಯಲ್ಲಿನ ನಾಮಫಲಕದ ಉರ್ದು ಅಕ್ಷರವನ್ನು ತೆರವುಗೊಳಿಸಲು ಆದೇಶಿಸಿದರು. ಜಿಲ್ಲಾಧಿಕಾರಿಯವರ ಆದೇಶದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಸುರೇಶ ಅವರು ಅಗ್ನಿಶಾಮಕ ಸಿಬ್ಬಂದಿಗಳ ಸಹಾಯ ಪಡೆದು ನಾಮಫಲಕದಲ್ಲಿದ್ದ ಉರ್ದು ಅಕ್ಷರ ತೆರವುಗೊಳಿಸಿದರು. ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್‌್ತ ಏರ್ಪಡಿಸಲಾಗಿದ್ದು,ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಪೊಲೀಸ್ ಅಧಿಕಾರಿಗಳು,ಸಿಬ್ಬಂದಿಗಳು ತೀವ್ರ ನಿಗಾ ಇಟ್ಟಿದ್ದಾರೆ.