ಸಸಿಕಾಂತ್‌ ಸೆಂಥಿಲ್‌ಗೆ ಸಿಎಂ ಕಚೇರಿಯಿಂದ ಫೋನ್‌

By Kannadaprabha NewsFirst Published Sep 7, 2019, 11:31 AM IST
Highlights

ಶುಕ್ರವಾರವಷ್ಟೇ ರಾಜೀನಾಮೆ ನೀಡಿದ IAS ಸಸಿಕಾಂತ್ ಸೆಂಥಿಲ್‌ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ನಿರ್ಣಯ ಬದಲಿಸಲು ಕರೆ ಬಂದಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದ್ದಾರೆ. ರಾಜಿನಾಮೆ ಹಿಂಪಡೆಯುವುದಾದರೆ ಜಿಲ್ಲಾಧಿಕಾರಿಯವರಿಗೆ ಮತ್ತೆ ಕಾರ್ಯ ನಿರ್ವಹಿಸಲು ಸರ್ಕಾರದಿಂದ ಪೂರ್ಣ ರೀತಿಯ ಸಹಕಾರ ಕೊಡುವ ಭರವಸೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಮಂಗಳೂರು(ಸೆ.07): ದ.ಕ. ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅವರು ರಾಜೀನಾಮೆ ಕೊಟ್ಟಿರುವ ವಿಚಾರ ಆಘಾತ ತರಿಸಿದೆ. ಈ ವಿಚಾರದಲ್ಲಿ ನಾನು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ಮಾತನಾಡಿದ್ದೇನೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದ್ದಾರೆ.

ಮಂಗಳೂರು: IAS ಸಸಿಕಾಂತ್ ಸೆಂಥಿಲ್ ರಾಜೀನಾಮೆ

ಸಸಿಕಾಂತ್‌ ಸೆಂಥಿಲ್‌ ಅವರು ರಾಜಿನಾಮೆಯನ್ನು ಹಿಂಪಡೆಯಬೇಕು. ಒಂದು ವೇಳೆ ರಾಜಿನಾಮೆ ಹಿಂಪಡೆಯುವುದಾದರೆ ಜಿಲ್ಲಾಧಿಕಾರಿಯವರಿಗೆ ಮತ್ತೆ ಕಾರ್ಯ ನಿರ್ವಹಿಸಲು ಸರ್ಕಾರದಿಂದ ಪೂರ್ಣ ರೀತಿಯ ಸಹಕಾರ ಕೊಡುವ ಭರವಸೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಸಿಎಂ ಕಚೇರಿಯಿಂದ ಫೋನ್:

ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಕೂಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅವರ ಬಳಿ ಮಾತನಾಡುವುದಾಗಿ ತಿಳಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅವರಿಗೆ ನಿರ್ಣಯ ಬದಲಿಸಲು ಕರೆ ಬಂದಿದೆ ಎಂದು ತಿಳಿಸಿದರು.

ಸಸಿಕಾಂತ್ ಸೆಂಥಿಲ್ ರಾಜೀನಾಮೆ, ಒಂದೇ ದಿನದಲ್ಲಿ ದಕ್ಷಿಣ ಕನ್ನಡಕ್ಕೆ ಹೊಸ ಡಿಸಿ

ನನ್ನ ಬಳಿ ಮಾತನಾಡಿದಾಗ ವೈಯಕ್ತಿಕ ವಿಚಾರದಿಂದ ರಾಜೀನಾಮೆ ಕೊಟ್ಟಿರುವುದು. ಮಾತ್ರವಲ್ಲ, ಅವರು ಈಗಾಗಲೇ ಬರೆದಿರುವ ಪತ್ರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು, ಸರ್ಕಾರ ರಾಜೀನಾಮೆಗೆ ಹೊಣೆಯಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಪಕ್ಷ ಈ ವಿಚಾರವನ್ನು ರಾಜಕೀಯ ಮಾಡುವುದು ಸರಿಯಲ್ಲ ಎಂದು ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಕೇಂದ್ರದ ವಿರುದ್ಧ ಸಿಡಿದೇ ರಾಜೀನಾಮೆ: ಸಸಿಕಾಂತ್ ಸೆಂಥಿಲ್ ಸಂದರ್ಶನ

click me!