ಜಿಲ್ಲೆಯಲ್ಲಿ ವಾರದಿಂದ ಅಧಿಕವಾಗಿ ಮಳೆ ಸುರಿಯುತ್ತಿದೆ. ಕಳೆದ ಬಾರಿಗೆ ಈ ವರ್ಷ ಕಡಿಮೆಯಾಗಿ ಮಳೆ ಸುರಿದರೂ, ಅಧಿಕ ಮಳೆಯಿಂದ ಕೆಲವಡೆ ಹಾನಿಯಾಗಿವೆ. ಮಳೆಹಾನಿ ಸಂತ್ರಸ್ತರಿಗೆ ಕೂಡಲೇ ಸ್ಪಂದಿಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಿವಮೊಗ್ಗ (ಜು.27): ಜಿಲ್ಲೆಯಲ್ಲಿ ವಾರದಿಂದ ಅಧಿಕವಾಗಿ ಮಳೆ ಸುರಿಯುತ್ತಿದೆ. ಕಳೆದ ಬಾರಿಗೆ ಈ ವರ್ಷ ಕಡಿಮೆಯಾಗಿ ಮಳೆ ಸುರಿದರೂ, ಅಧಿಕ ಮಳೆಯಿಂದ ಕೆಲವಡೆ ಹಾನಿಯಾಗಿವೆ. ಮಳೆಹಾನಿ ಸಂತ್ರಸ್ತರಿಗೆ ಕೂಡಲೇ ಸ್ಪಂದಿಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಕೃತಿ ವಿಕೋಪ ಮತ್ತು ಅಡಕೆ ಬೆಳೆಯ ಎಲೆಚುಕ್ಕಿ ರೋಗದ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಸ್ವಲ್ಪ ತಡವಾಗಿ ಮಳೆ ಆರಂಭವಾಗಿದೆ. ಅಂತಹ ಪ್ರಾಕೃತಿಕ ಹಾನಿಯಾಗಿಲ್ಲ. ಮಲೆನಾಡು ಭಾಗದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಹಾನಿ, ಕೆಲವೆಡೆ ರಸ್ತೆ, ಸೇತುವೆ, ಬೆಳೆ ಹಾನಿ ಹೀಗೆ ಕೆಲವೆಡೆ ಮೂಲಭೂತ ಸೌಕರ್ಯಗಳಿಗೆ ಹಾನಿ ಸಂಭವಿಸಿದ್ದು, ಅಧಿಕಾರಿಗಳು ತಮ್ಮ ಕಾರ್ಯಸ್ಥಾನದಲ್ಲಿ ಎಚ್ಚರಿಕೆಯಿಂದ ಶೀಘ್ರವಾಗಿ ಕ್ರಮ ಕೈಗೊಂಡು ಪರಿಹಾರ ಒದಗಿಸಬೇಕು ಎಂದು ಸೂಚನೆ ನೀಡಿದರು.
undefined
ವೈದ್ಯರೇ ರೋಗಿಗಳಿಗೆ ನಗುಮುಖದಿಂದ ಚಿಕಿತ್ಸೆ ನೀಡಿ: ಸಚಿವ ದಿನೇಶ್ ಗುಂಡೂರಾವ್
ಮೇ ಅಂತ್ಯಕ್ಕೆ 82 ಮಿಮೀ ಮಳೆ: ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿ, ಮಾಚ್‌ರ್ 1ರಿಂದ ಮೇ 31 ರವರೆಗೆ ಜಿಲ್ಲೆಯಲ್ಲಿ 82 ಮಿ.ಮೀ ಮಳೆಯಾಗಿದೆ. ವಾಡಿಕೆ ಮಳೆ 127 ಇದ್ದು ಶೇ.36 ಮಳೆ ಕೊರತೆ ಕಂಡುಬಂದಿದೆ. ಜೂನ್‌ನಲ್ಲಿ 472 ಮಿ.ಮೀ ವಾಡಿಕೆಗೆ 120 ಮಿ.ಮೀ ವಾಸ್ತವವಾಗಿ ಮಳೆಯಾಗಿದ್ದು, ಶೇ.75 ಮಳೆ ಕೊರತೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 22.3 ಮಿ.ಮೀ. ವಾಡಿಕೆಗೆ 58.4 ಮಿ.ಮೀ ಮಳೆಯಾಗಿದ್ದು, ಜಿಲ್ಲೆಯಲ್ಲಿ ಸರಾಸರಿ 162 ಮಿ.ಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 1223.5 ಮಿ.ಮೀ ವಾಡಿಕೆ ಮಳೆಗೆ 949.5 ಮಿ.ಮೀ ವಾಸ್ತವ ಮಳೆಯಾಗಿದ್ದು, ಶೇ.22 ಮಳೆ ಕೊರತೆಯಾಗಿದೆ ಎಂದು ಮಾಹಿತಿ ನೀಡಿದರು.
ಜೂನ್ 1ರಿಂದ ಜು.25 ರವರೆಗೆ ಜಿಲ್ಲೆಯಲ್ಲಿ 188 ಮನೆ ಭಾಗಶಃ ಹಾನಿ, 8 ತೀವ್ರ, 10 ಪೂರ್ಣ ಹಾನಿಯಾಗಿದ್ದು, ಒಟ್ಟು 206 ಮನೆ ಹಾನಿ ಮತ್ತು 34 ಕೊಟ್ಟಿಗೆ ಮನೆ ಹಾನಿಯಾಗಿದೆ. ಸರ್ಕಾರದ ನಿಯಮಾನುಸಾರ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಸಾಗರ ತಾಲೂಕಿನಲ್ಲಿ 500 ಹೆಕ್ಟೇರ್ ಬೆಳೆ ಹಾಗೂ ಸಾಗರದಲ್ಲಿ 315 ಬೆಳೆ ಜಲಾವೃತವಾಗಿದೆ. ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲೆಯಲ್ಲಿ 30.52 ಹೆಕ್ಟೇರ್ ಬಾಳೆ, ಶುಂಠಿ ಹಾನಿಗೊಳಗಾಗಿದೆ. ಪರಿಹಾರಕ್ಕೆ ಕ್ರಮ ವಹಿಸಲಾಗಿದೆ. ಬಿತ್ತನೆ ಬೀಜದ ಕೊರತೆ ಇಲ್ಲ. 15,500 ರೈತರು ಬೆಳೆವಿಮೆ ಮಾಡಿಸಿದ್ದು, ಜು.31 ರವರೆಗೆ ನೋಂದಣಿಗೆ ಸಮಯಾವಕಾಶ ಇದೆ ಎಂದು ತಿಳಿಸಿದರು.
ಪರಿಹಾರಕ್ಕೆ ಮಾರ್ಗಸೂಚಿ ಬಂದಿಲ್ಲ: ಮಳೆ ಪರಿಹಾರ ಕುರಿತಾದ ಮಾರ್ಗಸೂಚಿ ಬಂದಿಲ್ಲದ ಕಾರಣ ಪರಿಹಾರ ವಿತರಣೆ ತಡವಾಗುತ್ತಿದೆ. ಸಂತ್ರಸ್ತರಿಗೆ ವಿಳಂಬ ಮಾಡದೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಸಭೆಯಲ್ಲಿ ಹೇಳಿದರು. ಕಳೆದ ಸಾಲಿನಲ್ಲಿ ಎಲೆಚುಕ್ಕಿ ರೋಗ ನಿಯಂತ್ರಣ ಕುರಿತಾದ ಸಂಶೋಧನೆಗೆ .10 ಕೋಟಿ ಅನುದಾನ ಇರಿಸಲಾಗಿದ್ದು, ಈ ಬಾರಿ ಕೈಬಿಡಲಾಗಿದೆ. ಎಲೆಚುಕ್ಕಿ ರೋಗಕ್ಕೆ ಔಷಧಿ ಕಂಡುಹಿಡಿಯದೇ ಹೋದರೆ ಹಾಗೂ ಔಷಧಿ ಸಿಂಪಡಿಸಲು ಕ್ರಮ ವಹಿಸದಿದ್ದರೆ ಅಡಕೆ ತೋಟಕ್ಕೆ ತೋಟವೇ ನಾಶವಾಗುತ್ತದೆ. ಆದ್ದರಿಂದ ಕೃಷಿ ಮತ್ತು ತೋಟಗಾರಿಕೆ ಕಾಲೇಜಿನಲ್ಲಿ ಸಂಶೋಧನೆಗೆ ಅವಕಾಶ ಮಾಡಿಕೊಡಬೇಕು ಎಂದರು.
ಶಿಥಿಲಾವಸ್ಥೆಯಲ್ಲಿರುವ ಶಾಲೆ ಕೆಡವಲು ಶಿಕ್ಷಣ ಇಲಾಖೆಯವರು ವಿಳಂಬ ಧೋರಣೆ ತೋರುತ್ತಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೂಗುಡ್ತಿ ಬಳಿ ಜೀರಿಗೆಮನೆಯ ಸರ್ಕಾರಿ ಶಾಲಾ ಆವರಣದಲ್ಲಿರುವ ಹಳೆಯ ಅಕೇಶಿಯಾ ಮರಗಳು ಶಾಲಾ ಕಟ್ಟಡದ ಮೇಲೆ ಬೀಳುವ ಸಂಭವವಿದೆ. ಈ ಹಿನ್ನೆಲೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಮರ ಕಟಾವಿಗೆ ಇದುವರೆಗೆ ಅನುಮತಿ ನೀಡುತ್ತಿಲ್ಲ. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶೀಘ್ರವಾಗಿ ಮರ ಕಡಿಸಬೇಕೆಯ ಆಗ್ರಹಿಸಿದರು. ಮಳೆಗಾಲದಲ್ಲಿ ಮಲೆನಾಡು ಭಾಗದಲ್ಲಿ ಅಕೇಶಿಯಾ, ಇತರೆ ಮರಗಳು ಉರುಳಿ ಬಿದ್ದು ವಿದ್ಯುತ್ ಕಂಬಗಳು ಹಾನಿಯಾಗಿ ಕರೆಂಟ್ ಇಲ್ಲದೆ ತೊಂದರೆ ಅನುಭವಿಸುತ್ತೇವೆ. ಆದ್ದರಿಂದ ಮೆಸ್ಕಾಂ ಮತ್ತು ಅರಣ್ಯ ಇಲಾಖೆಯವರು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದರು.
ಹಳೆಯ ಶಾಲೆ ಕೆಡುವುದು ಮತ್ತು ಮರಗಳನ್ನು ಕಟಾವು ಮಾಡುವುದು ಅತಿ ಮುಖ್ಯ. ಇದು ತುಂಬಾ ಗಂಭೀರ ವಿಚಾರವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶೀಘ್ರ ಕ್ರಮ ಕೈಗೊಳ್ಳಬೇಕು. ಡಿಡಿಪಿಐ ಅವರು ಶಿಥಿಲಾವಸ್ಥೆಯಲ್ಲಿರುವ ಶಾಲೆ ಕೆಡವಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಪಿಡಬ್ಲ್ಯುಡಿ ಮತ್ತು ಪಿಆರ್‌ಇಡಿಯವರು ಶುಕ್ರವಾರದೊಳಗೆ ವರದಿ ನೀಡುವಂತೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು. ಭದ್ರಾವತಿ ತಾಲೂಕು ಮತ್ತು ಇತರೆಡೆ ಚಾನೆಲ್‌ಗಳಲ್ಲಿ ತುಂಬಿರುವ ಹೂಳು ತೆಗೆಸಲು ಹಾಗೂ ನಿರ್ವಹಣೆ ಕೈಗೊಳ್ಳಲು ಬೇಸಿಗೆಯಲ್ಲಿ ಯೋಜನೆ ರೂಪಿಸಿಕೊಳ್ಳಬೇಕು ಎಂದು ಶಾಸಕಿ ಶಾರದಾ ಪೂರಾರಯ ನಾಯ್‌್ಕ ಒತ್ತಾಯಿಸಿದರು.
ಭದ್ರಾ ಡ್ಯಾಂಗೆ ಬಿದಿರು ಮೆಳೆಗಳ ಕಂಟಕ: ಭದ್ರಾ ಪ್ರಾಜೆಕ್ಟ್ ಅಧಿಕಾರಿ ಮಾತನಾಡಿ, ಪ್ರಸ್ತುತ ಜಲಾಶಯದಲ್ಲಿ 152.9 ಅಡಿ ನೀರಿದ್ದು, 162 ಅಡಿಗಳಿಗೆ ಬಂದ ಮೇಲೆ ಕಾಲುವೆಗಳಿಗೆ ನೀರು ಹರಿಸಲು ಕ್ರಮ ವಹಿಸಲಾಗುವುದು. ಭದ್ರಾ ಜಲಾಶಯ ಒಂದೆಡೆ ಬಿದಿರು ಮೆಳೆ ಬೆಳೆದು ನೀರು ಲೀಕೇಜ್ ಆಗುತ್ತಿದ್ದು, 10ರಿಂದ 12 ಟಿಎಂಸಿ ನೀರು ವ್ಯರ್ಥವಾಗುತ್ತದೆ. ಅರಣ್ಯ ಇಲಾಖೆಯವರು ಇದನ್ನು ಸರಿಪಡಿಸಬೇಕು. ಬಿದಿರು ಕಡಿದು ಲೀಕೇಜ್ ಸರಿಪಡಿಸದಿದ್ದರೆ ಜಲಾಶಯಕ್ಕೆ ಸಮಸ್ಯೆ ಆಗುತ್ತದೆ ಎಂದು ವಿವರಿಸಿದರು. ಸಭೆಯಲ್ಲಿ ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
ಡಿಸಿಸಿ ಬ್ಯಾಂಕ್‌ನಲ್ಲಿ ಹಗರಣವೂ ನಡೆದಿಲ್ಲ, ತನಿಖೆಯೂ ಇಲ್ಲ: ಶಾಸಕ ನಂಜೇಗೌಡ
ಮಳೆಹಾನಿ ಪರಿಶೀಲನೆ: ಸಭೆ ನಂತರ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಹೊಸಮನೆ ರಾಜಾಕಾಲುವೆ ಕಾಮಗಾರಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆಯಲ್ಲಿ ಮಳೆಯಿಂದ ಕುಸಿದುಬಿದ್ದ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.