
ಮಾನ್ವಿ (ಮೇ.03): ಕಾನೂನಾತ್ಮಕವಾಗಿ ಸರ್ಕಾರದ ವತಿಯಿಂದ ಪಡೆದ ಬಡ ಸಾರ್ವಜನಿಕರ ನಿವೇಶನಗಳಿಗೆ ಹಕ್ಕು ಪತ್ರ ಹಸ್ತಾಂತರಿಸಬೇಕೆಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಹಂಚಿಕೆಯಾದ ನಿವೇಶನಗಳಿಗೆ ಹಕ್ಕುಪತ್ರ ಹಂಚಿಕೆ, ಕುಡಿಯುವ ನೀರು, ಚರಂಡಿ, ರಸ್ತೆ ವಿದ್ಯುತ್ ಸೇರಿದಂತೆ ವಿವಿಧ ಏಜೆನ್ಸಿಗಳಿಂದ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿ ಕೆಲಸಗಳನ್ನು ತ್ವರಿತಗತಿಯಲ್ಲಿ ಗುಣಮಟ್ಟದೊಂದಿಗೆ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಮಾನ್ವಿ ಹಾಗೂ ಸಿರವಾರ ತಾಲೂಕಿನ ಅತ್ಯಂತ ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳಾದರೆ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆಗಳನ್ನ ಇತ್ಯರ್ಥ ಗೊಳಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾನೂನಾತ್ಮಕವಾಗಿ ಸರ್ಕಾರದ ವತಿಯಿಂದ ಪಡೆದಿರುವ ನಿವೇಶನಗಳಿಗೆ ಶೀಘ್ರ ಹಕ್ಕು ಪತ್ರ ಹಸ್ತಾಂತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಜಿ.ಹಂಪಯ್ಯ ನಾಯಕ, ಮಾನ್ವಿ ತಹಶೀಲ್ದಾರ ಭೀಮರಾಯ್ ಸಿರವಾರ ತಹಶೀಲ್ದಾರ ರವಿ ಅಂಗಡಿ ಸೇರಿ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಭಿವೃದ್ಧಿಯ ಶಕೆ ಪ್ರಾರಂಭ: ಕೊಡಗಿನ ಮತದಾರರು ವಿದ್ಯಾವಂತ ಯುವಕರನ್ನು ಶಾಸಕರನ್ನು ಆಯ್ಕೆ ಮಾಡಿರುವ ಕಾರಣದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಜಿಲ್ಲಾ ಹಾಗೂ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಕೊಡವ ಸಮಾಜದಲ್ಲಿ ನಡೆದ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕಾಗಿ ತ್ಯಾಗ ಮಾಡಿದವರು ಪಕ್ಷದ ಆಸ್ತಿಯಾಗಿದ್ದಾರೆ. ಅಂತಹವರಿಗೆ ಪಕ್ಷ ಯಾವತ್ತು ಚಿರಋಣೆಯಾಗಿರುತ್ತದೆ.
ಸಣ್ಣ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ: ಸಚಿವ ಎನ್.ಎಸ್.ಬೋಸರಾಜು
ಪಂಚ ಗ್ಯಾರೆಂಟಿಗಳು ಎಲ್ಲ ಮನೆಗಳಿಗೆ ತಲುಪಿವೆ. ಪ್ರತಿ ಕುಟುಂಬಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಯ ಉದ್ದೇಶಗಳನ್ನು ಪ್ರತಿ ಕುಟುಂಬಗಳಿಗೂ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಈ ಮೂಲಕ ಪಕ್ಷದ ಸಂಘಟನೆ ಮಾಡಬೇಕು ಎಂದು ಹೇಳಿದರು. ಕೊಡಗಿನಲ್ಲಿ ಬಿಜೆಪಿ ಶಾಸಕರು 25 ವರ್ಷ ಅಧಿಕಾರ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿಲ್ಲ. ಗ್ರಾಮೀಣ ರಸ್ತೆಗಳು ಹಾಗು ರಾಜ್ಯಹೆದ್ದಾರಿಗಳನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತೆ. 25 ವರ್ಷಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆ ಕೊಟ್ಟಿದ್ದಾರೆ. ಇನ್ನು ಯಾವತ್ತೂ ಕೋಮುವಾದಿ ಬಿಜೆಪಿಯ ಶಾಸಕರು ಕೊಡಗಿನಲ್ಲಿ ಆಯ್ಕೆಯಾಗಬಾರದು. ಕಾಂಗ್ರೆಸ್ ಕಾರ್ಯಕರ್ತರು ಮನಸ್ಸು ಮಾಡಿದರೆ, ಎಲ್ಲವೂ ಸಾಧ್ಯ ಎಂದು ಹೇಳಿದರು.