ಹೊಸ ವರ್ಷಾಚರಣೆ: ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

By Suvarna News  |  First Published Dec 26, 2020, 3:59 PM IST

ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ| ಮೊದಲ ಬಾರಿಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮ ಪ್ರವೇಶ ಪ್ರವಾಸಿಗರಿಗೆ ನಿರ್ಬಂಧ| ಜಿಲ್ಲಾಡಳಿತದ ಕ್ರಮದಿಂದಾಗಿ ಪ್ರವಾಸಿಗರಿಗೆ ನಿರಾಸೆ| 


ಚಿಕ್ಕಬಳ್ಳಾಪುರ(ಡಿ.26):  ಡಿ.30 ರಿಂದ ಜನವರಿ 2 ವರೆಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.

Tap to resize

Latest Videos

ಹೌದು, ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಪ್ರವಾಸಿಗರು ಹೆಚ್ವಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ‌ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. 

ನಂದಿ ಬೆಟ್ಟಕ್ಕೆ ಒಂದೇ ದಿನ 9 ಸಾವಿರ ಪ್ರವಾಸಿಗರು

ಪ್ರತಿ ವರ್ಷ ಹೊಸ ವರ್ಷಕ್ಕೆ ಒಂದು ದಿನದ ಮಟ್ಟಿಗೆ ನಂದಿಗಿರಿ ಧಾಮಕ್ಕೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಜಿಲ್ಲಾಡಳಿತದ ಈ ಕ್ರಮದಿಂದಾಗಿ ಪ್ರವಾಸಿಗರಿಗೆ ನಿರಾಸೆಯಾಗಿದೆ.
 

click me!