ಇತ್ತೀಚೆಗೆ ನಿವೃತ್ತರಾಗಿದ್ದ ಎಎಸ್‌ಐ ಈರಪ್ಪ (65) ತಮ್ಮ ನಿವಾಸದಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಇಲ್ಲಿನ ಮಾದೆಗೋಡು ಗ್ರಾಮದಲ್ಲಿ ಸಂಭವಿಸಿದೆ.
ಶನಿವಾರಸಂತೆ(ಜೂ.24): ಇತ್ತೀಚೆಗೆ ನಿವೃತ್ತರಾಗಿದ್ದ ಎಎಸ್‌ಐ ಈರಪ್ಪ (65) ತಮ್ಮ ನಿವಾಸದಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಇಲ್ಲಿನ ಮಾದೆಗೋಡು ಗ್ರಾಮದಲ್ಲಿ ಸಂಭವಿಸಿದೆ.
ಈರಪ್ಪ, 27 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಮೇ 30ರಂದು ಸೇವೆಯಿಂದ ನಿವೃತ್ತಿಯಾಗಿದ್ದರು. ಬೆಳಗ್ಗೆ ಪತ್ನಿ ಮತ್ತು ಮಗ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು.
ಎಡ ಅಂಗೈ ಕಳೆದುಕೊಂಡರೂ ಮಾಸ್ಕ್ ಹೊಲೀತಾಳೆ ದಿವ್ಯಾಂಗ ಬಾಲಕಿ..!
ಕುರ್ಚಿಯಲ್ಲಿ ಕುಳಿತುಕೊಂಡೇ ಎದೆಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಬ್ದ ಕೇಳಿ ಮನೆಗೆ ಬಂದ ತಾಯಿ, ಮಗ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]