ಶಿವಮೊಗ್ಗ: ಕಂದಾಯ ಸಚಿವರ ಗ್ರಾಮ ವಾಸ್ತವ್ಯ ರದ್ದು..!

By Girish Goudar  |  First Published Jan 28, 2023, 11:48 AM IST

ಒಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಇದೀಗ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ರದ್ದಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಗ್ರಾಮಸ್ಥರು. 


ಶಿವಮೊಗ್ಗ(ಜ.28):  ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಅವರ ಗ್ರಾಮ ವಾಸ್ತವ್ಯ ರದ್ದಾಗಿದೆ. ಒಮ್ಮೆ ಪ್ರಧಾನಿ ನರೇಂದ್ರ ಮೋದಿಯವರು ಇದೀಗ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ರದ್ದಾಗಿದ್ದಕ್ಕೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. 

ಕಳೆದ ವರ್ಷ ಏಪ್ರಿಲ್ 24ರಂದು ಗ್ರಾಮ ಪಂಚಾಯತ್ ದಿವಸ್ ನಿಮಿತ್ತ ಪ್ರಧಾನಿ ನಮೋ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಳು ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಯನ್ನ ಕೈಗೊಳ್ಳಲಾಗಿತ್ತು. 

Latest Videos

undefined

Grama Vastavya: ಮಾಚನಾಳ ತಾಂಡಾ ಅಭಿವೃದ್ಧಿಗೆ 1 ಕೋಟಿ ವಿಶೇಷ ಅನುದಾನ: ಸಚಿವ ಅಶೋಕ ಘೋಷಣೆ

ಇದೀಗ ಕಂದಾಯ ಸಚಿವರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನ ಲಭಿಸಿತ್ತು. ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಾಗುವಳಿ ಚೀಟಿ ವಿತರಣೆಗೆ ಯೋಚಿಸಲಾಗಿತ್ತು. ಮುಂದಿನ ತಿಂಗಳು ಮತ್ತೆ ಕಂದಾಯ ಸಚಿವರ ದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ ಅಂತ ತಿಳಿದು ಬಂದಿದೆ. 

click me!