ಮತದಾರರ ಪಟ್ಟಿಪರಿಷ್ಕರಣೆ; ಹೆಸರು ಸೇರ್ಪಡೆಗೆ ಅವಕಾಶ

By Kannadaprabha News  |  First Published Dec 31, 2019, 11:34 AM IST

ಜನವರಿ 1, 2020ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ.


ಮಡಿಕೇರಿ(ಡಿ.31): ಜನವರಿ 1, 2020ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ.

ನಮೂನೆ-6 ರಲ್ಲಿ ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾರ್ವತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8ಎ ರಲ್ಲಿ ಅವಕಾಶವಿದೆ.

Tap to resize

Latest Videos

 

ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎ ರಲ್ಲಿ 2020ರ ಜನವರಿ, 15ರ ವರೆಗೆ ನಿಮ್ಮ ಮತಗಟ್ಟೆಯ ಬೂತ್‌ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟತಾಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ (ನಮೂನೆ-6 ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-8ಎ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಸೀಲ್ದಾರರ ಕಚೇರಿ ಸಂಪರ್ಕಿಸಬಹುದು. ಹಾಗೂ  https://www.ceokarnataka.kar.nic.in/  ಸಂಪರ್ಕಿಸಬಹುದು.

ವೆಬ್‌ಸೈಟ್‌ನಲ್ಲಿಯೂ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿ ಪಡೆಯಬಹುದು. www.nvsp.nic.in  ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ನಮೂನೆ 6, 6ಎ, 7, 8 ಮತ್ತು 8ಎ ನ್ನು ಹಾಕಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ. 

click me!