ಸೇವಾಪರ್ವ ಕೊನೆಗೊಳಿಸಿದ IPS ಅಣ್ಣಾಮಲೈ

Published : Jun 11, 2019, 08:36 AM IST
ಸೇವಾಪರ್ವ ಕೊನೆಗೊಳಿಸಿದ IPS ಅಣ್ಣಾಮಲೈ

ಸಾರಾಂಶ

ಸರ್ಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಐಪಿಎಸ್‌ ಅಧಿಕಾರಿ ಅಣ್ಣಾಮಲೈ  ಡಿಸಿಪಿ ಹುದ್ದೆಯಿಂದ ಮುಕ್ತರಾಗಿ ತಮ್ಮ ಸೇವಾಪರ್ವ ಕೊನೆಗೊಳಿಸಿದರು.

ಬೆಂಗಳೂರು :  ಇತ್ತೀಚೆಗೆ ಸರ್ಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಸೋಮವಾರ ಈಗಿರುವ ಡಿಸಿಪಿ ಹುದ್ದೆಯ ಜವಾಬ್ದಾರಿಯಿಂದ ಮುಕ್ತರಾದರು.

ದಕ್ಷಿಣ ವಿಭಾಗದ ಡಿಸಿಪಿ ಹುದ್ದೆಯಲ್ಲಿದ್ದ ಅಣ್ಣಾಮಲೈ ಅವರು ಸೋಮವಾರ ಸಂಜೆ ನೂತನವಾಗಿ ಡಿಸಿಪಿ ಹುದ್ದೆಗೆ ನೇಮಕಗೊಂಡ ರೋಹಿಣಿ ಕಟೋಚ್‌ ಸಪೆಟ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇದರೊಂದಿಗೆ ಪೊಲೀಸ್‌ ಇಲಾಖೆಯಲ್ಲಿ ಅಣ್ಣಾಮಲೈ ಅವರ ಸೇವಾ ಪರ್ವವು ಸಹ ಕೊನೆಗೊಂಡಿತು. 

ಅಣ್ಣಾಮಲೈ ಅವರ ರಾಜೀನಾಮೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿಲ್ಲ. ಈಗಾಗಲೇ ಕೇಂದ್ರ ಗೃಹ ಸಚಿವಾಲಯಕ್ಕೆ ಅವರ ರಾಜೀನಾಮೆ ಪತ್ರ ತಲುಪಿದ್ದು, ಇನ್ನೊಂದು ವಾರದಲ್ಲಿ ಅಂಗೀಕಾರದ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿದು ಬಂದಿದೆ.

PREV
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!