ಮತ್ತೊಮ್ಮೆ ವಿವಾದಕ್ಕೆ ಕಾರಣವಾದ ರೋಹಿಣಿ ಸಿಂಧೂರಿ ವರ್ಗಾವಣೆ

By Web DeskFirst Published Sep 25, 2019, 8:28 AM IST
Highlights

ಮತ್ತೊಮ್ಮೆ ವಿವಾದಕ್ಕೆ ಕಾರಣವಾದ ರೋಹಿಣಿ ಸಿಂಧೂರಿ ವರ್ಗಾವಣೆ| ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಬಳಕೆ ಮಾಡಲು ಸುಪ್ರೀಂಕೋರ್ಟ್‌ನ ಮಾರ್ಗಸೂಚಿ ಇದೆ| ಸುಪ್ರೀಂಕೋರ್ಟ್ ಹಣ ಸದ್ಬಳಕೆ ಬಗ್ಗೆ ನಿಗಾ  ವಹಿಸುತ್ತಿರುತ್ತದೆ| ಹೀಗಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿ ಹಣ ವರ್ಗಾಯಿಸಲು ಸಾಧ್ಯವಿಲ್ಲ| 

ಬೆಂಗಳೂರು: (ಸೆ. 25) ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡಾಗ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.


ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಲು ಒಪ್ಪಿಲ್ಲ ಎಂಬ ಕಾರಣಕ್ಕೆ ಯಾವುದೇ ಹುದ್ದೆ ತೋರಿಸದೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಎಲ್ಲಾ ಇಲಾಖೆಗಳಿಂದಲೂ ಹಣ ನೀಡಲಾಗುತ್ತಿದೆ. ಹೀಗಾಗಿ ಕಲ್ಯಾಣ ನಿಧಿಯಲ್ಲಿರುವ ೮ ಸಾವಿರ ಕೋಟಿ ರು.ಗಳ ಪೈಕಿ ೩ ಸಾವಿರ ಕೋಟಿ ರು.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬೇಕು ಎಂದು ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಒತ್ತಾಯ ಮಾಡಿದ್ದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 


ಇದಕ್ಕೆ ಒಪ್ಪದ ರೋಹಿಣಿ ಸಿಂಧೂರಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಬಳಕೆ ಮಾಡಲು ಸುಪ್ರೀಂಕೋರ್ಟ್‌ನ ಮಾರ್ಗಸೂಚಿ ಇದೆ. ಸುಪ್ರೀಂಕೋರ್ಟ್ ಹಣ ಸದ್ಬಳಕೆ ಬಗ್ಗೆ ನಿಗಾ ವಹಿಸುತ್ತಿರುತ್ತದೆ. ಹೀಗಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿ ಹಣ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು.


ಈ ವೇಳೆ ಕನಿಷ್ಠ ೧ ಸಾವಿರ ಕೋಟಿ ರು. ಆದರೂ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ವರ್ಗಾವಣೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಒತ್ತಡ ಹೇರಿದ್ದರು ಎಂಬ ಆರೋಪ ವ್ಯಕ್ತವಾಗಿದೆ. ಇದಲ್ಲದೆ ಕಾರ್ಮಿಕರು ಮತ್ತು ಅವರ ಮಕ್ಕಳ ಕಲ್ಯಾಣ ಸೇವೆಗಾಗಿ ತಂತ್ರಜ್ಞಾನ ಆಧಾರಿತ ಸೇವೆಯನ್ನು (೨೪/೭) ಸಹಾಯವಾಣಿ ಒದಗಿಸಲು ಟೆಂಡರ್ ಕರೆಯದೆ ಕಿಯೋನಿಕ್ಸ್‌ಗೆ ನೀಡಬೇಕು ಎಂದು ಒತ್ತಾಯಿಸಿದ್ದರು ಎನ್ನಲಾಗಿದೆ.

ರೋಹಿಣಿ ಮುಂದುವರೆಸಲು ಸಿಎಸ್ ಗೆ ಮಣಿವಣ್ಣನ್ ಮನವಿ 


ರೋಹಿಣಿ ಸಿಂಧೂರಿ ವರ್ಗಾವಣೆಗೆ ತಾವು ಕಾರಣ ಎಂಬ ಆರೋಪಗಳನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ಅಲ್ಲದೆ, ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಕಾರಣ ಎಂದು ಹರಿದಾಡುತ್ತಿರುವ ಸುದ್ದಿಗಳಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. 


ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡುವುದು ಸರ್ಕಾರದ ವಿಶೇಷಾಧಿಕಾರ. ಕಿಯೋನಿಕ್ಸ್‌ಗೆ ಟೆಂಡರ್ ನೀಡಲು ಹೇಳಿದ್ದೆ ಎಂಬುದು ವಾಸ್ತವವಲ್ಲ. ಆ.೭ರಂದು ಸರ್ಕಾರ ಆದೇಶ ಹೊರಡಿಸಿ ಕಾರ್ಮಿಕ ಇಲಾಖೆಗೆ ಸಹಾಯವಾಣಿ ಟೆಂಡರ್‌ಗೆ ಆದೇಶಿಸಿತ್ತು. ಇದರಲ್ಲಿ ನನ್ನ ಮಧ್ಯಪ್ರವೇಶಕ್ಕೆ ಆಸ್ಪದವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಅಭಿವೃದ್ಧಿಗಾಗಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಯದರ್ಶಿಯಾಗಿ ಮುಂದುವರೆಸಬೇಕು ಎಂದು ಮನವಿ ಮಾಡಿದ್ದಾರೆ.

 ಇದಕ್ಕೆ ಒಪ್ಪದ ರೋಹಿಣಿ ಸಿಂಧೂರಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಬಳಕೆ ಮಾಡಲು ಸುಪ್ರೀಂಕೋರ್ಟ್‌ನ ಮಾರ್ಗಸೂಚಿ ಇದೆ. ಸುಪ್ರೀಂಕೋರ್ಟ್ ಹಣ ಸದ್ಬಳಕೆ ಬಗ್ಗೆ ನಿಗಾ ವಹಿಸುತ್ತಿರುತ್ತದೆ. ಹೀಗಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿ ಹಣ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು.


ಈ ವೇಳೆ ಕನಿಷ್ಠ ೧ ಸಾವಿರ ಕೋಟಿ ರು. ಆದರೂ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ವರ್ಗಾವಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ ಎಂದು ಒತ್ತಡ ಹೇರಿದ್ದರು ಎಂಬ ಆರೋಪ ವ್ಯಕ್ತವಾಗಿದೆ. ಇದಲ್ಲದೆ ಕಾರ್ಮಿಕರು ಮತ್ತು ಅವರ ಮಕ್ಕಳ ಕಲ್ಯಾಣ ಸೇವೆಗಾಗಿ ತಂತ್ರಜ್ಞಾನ ಆಧಾರಿತ ಸೇವೆಯನ್ನು (೨೪/೭) ಸಹಾಯವಾಣಿ ಒದಗಿಸಲು ಟೆಂಡರ್ ಕರೆಯದೆ ಕಿಯೋನಿಕ್ಸ್‌ಗೆ ನೀಡಬೇಕು ಎಂದು ಒತ್ತಾಯಿಸಿದ್ದರು ಎನ್ನಲಾಗಿದೆ. 

click me!