'ಅಭಿವೃದ್ಧಿಯಲ್ಲಿ ಹಿಂದುಳಿದ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿ'

By Kannadaprabha NewsFirst Published Mar 5, 2020, 9:07 AM IST
Highlights

ಉತ್ತರ ಕರ್ನಾಟಕ ಭಾಗಕ್ಕೆ ಈ ವರ್ಷ ಬಜೆಟ್‌ನಲ್ಲಿ ಸಿಎಂ ಯಡಿಯೂರಪ್ಪ ಹೆಚ್ಚಿನ ಹಣ ಮೀಸಲಿರಿಸಬೇಕು| 1693ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ನಿರಂತರ ಹೋರಾಟ ವೇದಿಕೆಯಲ್ಲಿ ಜೋಗಣ್ಣವರ| 

ನರಗುಂದ(ಮಾ.05): ರಾಜ್ಯದ ಹಿಂದುಳಿದ ಪ್ರದೇಶವಾದ ಉತ್ತರ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಗಳು ಮುಂದಾಗಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದ್ದಾರೆ. 

1693ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಭಾಗದ ಬಯಲು ಸೀಮೆಯ ನಾಡಿನ 13 ಜಿಲ್ಲೆಗಳ ನೀರಾವರಿ, ಕೃಷಿ, ಆರೋಗ್ಯ,ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿವೆ. ಆದ್ದರಿಂದ ಈ ಸರ್ಕಾರ ರಚನೆ ಮಾಡಲು ಹೆಚ್ಚಿನ ಸ್ಥಾನ ಗಳಿಸಿ ಕೊಟ್ಟ ಉತ್ತರ ಕರ್ನಾಟಕ ಭಾಗಕ್ಕೆ ಈ ವರ್ಷ ಬಜೆಟ್‌ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಹೆಚ್ಚಿನ ಹಣ ಮೀಸಲಿರಿಸಬೇಕು ಎಂದು ಒತ್ತಾಯಿಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉತ್ತರ ಕರ್ನಾಟಕ ಭಾಗದ ಮಲಪ್ರಭೆ ಅಚ್ಚುಕಟ್ಟು ಪ್ರದೇಶದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಬಂಡಾಯ ನೆಲದಲ್ಲಿ ಮಹದಾಯಿ ಹೋರಾಟಗಾರರು 30 ವರ್ಷದಿಂದು ಸುದಿರ್ಘ ಹೋರಾಟ ಮಾಡಿದ ಪರಿಣಾಮ ಯೋಜನೆ ಜಾರಿಗೆ ಅನುಮತಿ ಸಿಕ್ಕಿದೆ. ಆದ್ದರಿಂದ ಸರ್ಕಾರ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿ ಹರಿಯುವ 13.42 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಹೆಚ್ಚಿನ ಅನುದಾನ ಬಜೆಟ್‌ನಲ್ಲಿ ನೀಡಿ ಶೀಘ್ರ ಕಾಮಗಾರಿ ಪ್ರಾರಂಭ ಮಾಡಿ ಮಲಪ್ರಭೆ ಜಲಾಶಯಕ್ಕೆ ಈ ನೀರು ತಂದು ಸೇರಿಸಬೇಕು ಎಂದರು. 

ಉತ್ತರ ಕರ್ನಾಟಕ ಬಯಲು ಸೀಮೆಯಾಗಿದ್ದರಿಂದ ಪ್ರತಿ ವರ್ಷ ಈ ಭಾಗದಲ್ಲಿ ಮಳೆಯಾಗದೆ ಜನತೆ ಕುಡಿಯುವ ನೀರಿಗೆ ಹಾಹಾಕಾರ ಪಡಬೇಕಾದ ಸ್ಥಿತಿಯಿದೆ. ಆದ್ದರಿಂದ ಈ ಭಾಗದಲ್ಲಿ ಹೆಚ್ಚು ಕೃಷಿ ಹೊಂಡ ಮತ್ತು ಚೆಕ್ ಡ್ಯಾಂ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡಲು ಸರ್ಕಾರ ಮುಂದಾಗಬೇಕೆಂದು ಹೇಳಿದರು. 

ರೈತ ಸೇನಾ ಸಂಘಟನೆ ಸದಸ್ಯ ಶಿವಪ್ಪ ಸಾತಣ್ಣವರ ಮಾತನಾಡಿ, ಮಹದಾಯಿ ಹಾಗೂ ಕಳಸಾ ಬಂಡೂರಿ ನೀರು ಬಳಕೆ ಮಾಡಿಕೊಳ್ಳಲು ಎಲ್ಲ ರೀತಿಯ ಕಾನೂನು ಅನುಕೂಲಗಳಿದ್ದು, ಸರ್ಕಾರ ಬೇಗ ಈ ನೀರು ಬಳಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದರು. ಅಡಿಯಪ್ಪ ಕೋರಿ, ವೀರಬಸಪ್ಪ ಹೂಗಾರ, ಸೋಮಲಿಂಗಪ್ಪ ಆಯಿಟ್ಟಿ, ಅರ್ಜುನ ಮಾನೆ, ಮಲ್ಲೇಶಪ್ಪ ಅಣ್ಣಿಗೇರಿ, ಎ.ಪಿ. ಪಾಟೀಲ, ಜಗನ್ನಾಥ ಮುಧೋಳೆ, ಸುಭಾಸ ಗಿರಿಯಣ್ಣವರ, ಸಂಗಪ್ಪ ಶಾನವಾಡ, ವೆಂಕಪ್ಪ ಹುಜರತ್ತಿ, ಹನುಮಂತ ಸರನಾಯ್ಕರ, ವಾಸು ಚವ್ಹಾಣ, ಯಲ್ಲಪ್ಪ ಗುಡದೇರಿ, ಮಾರುತಿ ಬಡಿಗೇರ, ಬಸವ್ವ ಪೂಜಾರ, ಮಂಜುಳಾ ಸರನಾಯ್ಕರ, ಮಲ್ಲಪ್ಪ ಐನಾಪುರ, ಕೆ.ಎಚ್. ಮೊರಬದ, ನಾಗರತ್ನಾ ಸವಳಭಾವಿ, ಅನಸವ್ವ ಶಿಂದೆ, ಶಾಂತವ್ವ ಭೂಸರಡ್ಡಿ, ಈರಣ್ಣ ಗಡಗಿ ಸೇರಿದಂತೆ ಮುಂತಾದವರು ಇದ್ದರು.

ಉತ್ತರ ಕರ್ನಾಟಕ ಬಯಲು ಸೀಮೆಯಾಗಿದ್ದರಿಂದ ಪ್ರತಿ ವರ್ಷ ಈ ಭಾಗದಲ್ಲಿ ಮಳೆಯಾಗದೆ ಜನತೆ ಕುಡಿಯುವ ನೀರಿಗೆ ಹಾಹಾಕಾರ ಪಡಬೇಕಾದ ಸ್ಥಿತಿಯಿದೆ. ಆದ್ದರಿಂದ ಈ ಭಾಗದಲ್ಲಿ ಹೆಚ್ಚು ಕೃಷಿ ಹೊಂಡ ಮತ್ತು ಚೆಕ್ ಡ್ಯಾಂ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡಲು ಸರ್ಕಾರ ಮುಂದಾಗಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಹೇಳಿದ್ದಾರೆ.
 

click me!