ರಾಜಕೀಯ ದುರುದ್ದೇಶದಿಂದ ಕುಲಕರ್ಣಿ ಸಿಬಿಐ ವಶ: S R ಪಾಟೀಲ

By Kannadaprabha NewsFirst Published Nov 6, 2020, 3:04 PM IST
Highlights

ಮೋದಿ ನೇತೃತ್ವದ ಸರ್ಕಾರದಲ್ಲಿ ಸಿಬಿಐ, ಐಟಿ, ಇಡಿ, ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ನಡೆದಿದೆ| ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ: ಎಸ್‌.ಆರ್‌.ಪಾಟೀಲ| 

ಬಾಗಲಕೋಟೆ(ನ.06):ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವ ಹಿಂದೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ ದೂರಿದ್ದಾರೆ.  ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಚಾಜ್‌ರ್‍ಶೀಟ್‌ ಸಲ್ಲಿಕೆಯಾದ ನಂತರ ರಾಜಕೀಯ ಕಾರಣಕ್ಕೆ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು ಎಂದರು.

ವಿನಯ ಕುಲಕರ್ಣಿ ಅವರನ್ನು ಆರೋಪಿತರನ್ನಾಗಿಸುವ ರಾಜಕೀಯ ದುರುದ್ದೇಶದಿಂದ ಪ್ರಕರಣ ಸಿಬಿಐಗೆ ಒಪ್ಪಿಸಲಾಗಿತ್ತು. ಮೋದಿ ನೇತೃತ್ವದ ಸರ್ಕಾರದಲ್ಲಿ ಸಿಬಿಐ, ಐಟಿ, ಇಡಿ, ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ನಡೆದಿದೆ ಎಂದು ದೂರಿದ್ದಾರೆ. 

ಪ್ರತಿಪಕ್ಷದವರನ್ನು ಗುರಿಯಾಗಿಟ್ಟುಕೊಂಡು ಸ್ವಾಯತ್ತ ಸಂಸ್ಥೆಗಳ ದುರುಪಯೋಗಪಡಿಸಿಕೊಂಡು ವಿಪಕ್ಷಗಳನ್ನು ಹತ್ತಿಕ್ಕುವುದು ಸರಿಯಲ್ಲ ಎಂದ ಅವರು, ಇಂತಹ ಪ್ರಕರಣಗಳನ್ನು ಸಿಬಿಐಗೆ ವಹಿಸುವ ಮೂಲಕ ರಾಜ್ಯದಲ್ಲಿರುವ ಪೊಲೀಸರ ಆತ್ಮಬಲವನ್ನು ಡಿಮಾರಲ್‌ ಮಾಡುವ ತಂತ್ರ ಎಂದರು.

ಕೊಲೆ ಬೆದರಿಕೆ ಕರೆ: ಹುನಗುಂದ ಮಾಜಿ ಶಾಸಕ ಕಾಶಪ್ಪನವರ

ವಿನಯ ಕುಲಕರ್ಣಿ ಅವರನ್ನು ಬಿಜೆಪಿಗೆ ಕರೆತರುವ ಉದ್ದೇಶದ ಕುರಿತು ಇಂತಹ ದಾಳಿಗಳು ನಡೆಯುತ್ತಿರಬಹುದೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದರು.

ಮುಂಬೈನಲ್ಲಿ ಪತ್ರಕರ್ತ ಅರ್ನಾಬ್‌ ಗೋಸ್ವಾಮಿ ಬಂಧನದ ಕುರಿತು ಮಾತನಾಡಿದ ಅವರು, ಆತ್ಮಹತ್ಯೆ ಪ್ರಚೋದನೆ ಕೇಸ್‌ನಲ್ಲಿ ಅವರನ್ನು ಬಂಧಿ​ಸಿದ್ದಾರೆ. ವಿಚಾರಣೆ ನಡೆಯುತ್ತಿದೆ ನೋಡೋಣ ಎಂದರು.
 

click me!