ಆ ನಾಯಕನನ್ನು ಭೇಟಿ ಮಾಡಿದ ಸಾ.ರಾ.ಮಹೇಶ್ : ಏನಿದು ಕುತೂಹಲದ ರಾಜಕೀಯ..?

Kannadaprabha News   | Asianet News
Published : Dec 14, 2020, 09:13 AM ISTUpdated : Dec 14, 2020, 09:29 AM IST
ಆ ನಾಯಕನನ್ನು ಭೇಟಿ ಮಾಡಿದ ಸಾ.ರಾ.ಮಹೇಶ್ : ಏನಿದು ಕುತೂಹಲದ ರಾಜಕೀಯ..?

ಸಾರಾಂಶ

ಜೆಡಿಎಸ್ ಶಾಸಕ ಸಾ ರಾ ಮಹೇಶ್ ಆ ನಾಯಕನನ್ನು ಭೇಟಿ ಮಾಡಿದ್ದು ಇದೀಗ ರಾಜಕೀಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ,. 

ಮೈಸೂರು (ಡಿ.14): ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪತನವಾದ ನಂತರ ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದ ಜೆಡಿಎಸ್‌ ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ಸಾ.ರಾ. ಮಹೇಶ್‌ ಭಾನುವಾರ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಗ್ರಾಪಂ ಚುನಾವಣೆ ಬೆನ್ನಲ್ಲೇ ಸಕ್ರಿಯರಾಗಿರುವ ಜೆಡಿಎಸ್‌ ಶಾಸಕರು, ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು, ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಜಿಟಿಡಿ ಆಕ್ಟಿವ್‌ ಆಗ್ತಾರೆ: ಈ ವೇಳೆ ಶಾಸಕ ಸಾ.ರಾ. ಮಹೇಶ್‌ ಮಾತನಾಡಿ, ಜಿ.ಟಿ. ದೇವೇಗೌಡರು ನಮ್ಮ ನಾಯಕರು. ಅವರನ್ನು ಭೇಟಿ ಮಾಡುವುದರಲ್ಲಿ ವಿಶೇಷ ಏನಿಲ್ಲ. ಅವರು ನಮ್ಮ ಪಕ್ಷದಲ್ಲೆ ಇದ್ದಾರೆ. ಮುಂದೆ ನಮ್ಮ ಜೊತೆ ಬಂದೇ ಬರುತ್ತಾರೆ. ಕೆಲ ದಿನಗಳ ಕಾಲ ಆಕ್ಟಿವ್‌ ಇರಲಿಲ್ಲ. ಇನ್ನು ಮುಂದೆ ಆಕ್ಟಿವ್‌ ಆಗುತ್ತಾರೆ ಎಂದರು.

ಗ್ರಾ.ಪಂ ಚುನಾವಣೆಗೆ ಜೆಡಿಎಸ್​ ತಂತ್ರ: ಒಂದಾದ ದಳಪತಿಗಳು..! .

ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಅಂತ ಕೇಳ್ತಿವಿ. ಅವರು ನಮಗಿಂತ 25 ವರ್ಷ ದೊಡ್ಡವರು. ನಮ್ಮಂತವರು ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳುವ ಅಧಿಕಾರ ಅವರಿಗೆ ಇದೆ. ಹಾಗೇನಾದರೂ ನಾನು ತಪ್ಪು ಮಾಡಿದ್ದರೆ ಅದನ್ನು ತಿದ್ದಿಕೊಳ್ಳುತ್ತೇನೆ. ಕುಮಾರಸ್ವಾಮಿ ಜಿಟಿಡಿಯವರನ್ನು ಭೇಟಿ ಮಾಡುವ ಸಂದರ್ಭ ಬಂದಿಲ್ಲ. ಅಂತಹ ಸಂದರ್ಭ ಬಂದರೆ ಅವರು ಜಿಡಿಟಿಯವರನ್ನು ಭೇಟಿ ಮಾಡುತ್ತಾರೆ. ಇನ್ಮುಂದೆ ಎಲ್ಲವು ಸರಿಯಾಗಲಿದೆ. ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷ ಹೆಚ್ಚಿನ ಸಾಧನೆ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಕ್ರಿಯೆಗೆ ಜಿಟಿಡಿ ನಕಾರ:  ಇದೇ ವೇಳೆ ಶಾಸಕ ಜಿ.ಟಿ. ದೇವೇಗೌಡ ಅವರು ಶಾಸಕ ಸಾ.ರಾ. ಮಹೇಶ್‌ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡದೆ ತೆರಳಿದ ಪ್ರಸಂಗ ಸಹ ನಡೆಯಿತು. ಇದು ವೈಯಕ್ತಿಕ ಭೇಟಿ. ಏನು ಮಾತನಾಡೋಲ್ಲ. ನನ್ನ ಹೇಳಿಕೆಗಳು ಮಾಧ್ಯಮದಲ್ಲಿ ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿ ಏನು ನಡೆದುಕೊಂಡಿಲ್ಲ ಎಂದು ಜಿ.ಟಿ. ದೇವೇಗೌಡರು ಸ್ಪಷ್ಟಪಡಿಸಿದರು.

PREV
click me!

Recommended Stories

ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ