ಜುಲೈ 23 ರಂದು ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಉಡುಪಿಗೆ, 15 ಸಾವಿರ ಸಸಿ ವಿತರಣೆ

Published : Jul 21, 2023, 05:09 PM IST
ಜುಲೈ 23 ರಂದು ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಉಡುಪಿಗೆ, 15 ಸಾವಿರ ಸಸಿ ವಿತರಣೆ

ಸಾರಾಂಶ

ಉಡುಪಿಯಲ್ಲಿ ಉತ್ತಮ ತಳಿಯ ಕಸಿ ಸಸ್ಯಗಳು, ಹೂವು - ಹಣ್ಣು - ಹಂಪಲು, ಅರಣ್ಯ ಸಂಪತ್ತಿನ ಎಲ್ಲಾ ಜಾತಿಯ ಗಿಡಗಳ ಉಚಿತ ವಿತರಣಾ ಮೇಳ ಸಸ್ಯೋತ್ಸವ 2023 ಕಾರ್ಯಕ್ರಮ ನಡೆಯಲಿದ್ದು,  ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಭಾಗವಹಿಸಿದ್ದಾರೆ.

ಉಡುಪಿ (ಜು.21): ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಸರಳೇಬೆಟ್ಟು ಮಣಿಪಾಲ ಮತ್ತು ಪರಿವಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗು ಸ್ನೇಹ ಸಂಗಮ ಸರಳೇಬೆಟ್ಟು ಮಣಿಪಾಲ ಇವರ ಸಹಭಾಗಿತ್ವದಲ್ಲಿ ಉತ್ತಮ ತಳಿಯ ಕಸಿ ಸಸ್ಯಗಳು, ಹೂವು - ಹಣ್ಣು - ಹಂಪಲು, ಅರಣ್ಯ ಸಂಪತ್ತಿನ ಎಲ್ಲಾ ಜಾತಿಯ ಗಿಡಗಳ ಉಚಿತ ವಿತರಣಾ ಮೇಳ ಸಸ್ಯೋತ್ಸವ 2023 ಕಾರ್ಯಕ್ರಮವನ್ನು ಜುಲೈ 23 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಜೀವ ಕಲಾ ಮಂಡಲದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. 

ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪದ್ಮಶ್ರೀ ಸಾಲು ಮರದ ತಿಮ್ಮಕ್ಕನವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಂದು 15,000 ಗಿಡಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ 2.58 ಲಕ್ಷ ಫಲಾನುಭವಿಗಳು

ಈ ಸಸ್ಯೋತ್ಸವದಲ್ಲಿ ತೋಟಗಾರಿಕಾ ಇಲಾಖೆಯ ಎಲ್ಲಾ ಪ್ರಕಾರದ ಹೂವಿನ ಗಿಡಗಳು, ಕಸಿ ಮಾವಿನ ಗಿಡಗಳು ಸೇರಿದಂತೆ ಸಾಗುವಾನಿ, ಶ್ರೀಗಂಧ ರಕ್ತ ಚಂದನ, ಬಿಲ್ಪತ್ರೆ ಮುಂತಾದ ಗಿಡಗಳು ಉಚಿತವಾಗಿ ವಿತರಣೆಯಾಗಲಿದೆ ಎಂದವರು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಠಾಕೂರ್, ಸ್ನೇಹ ಸಂಗಮ ಸರಳೇಬೆಟ್ಟು ಮಣಿಪಾಲ ಅಧ್ಯಕ್ಷ ಗುರುರಾಜ್ ಭಂಡಾರಿ ಸರಳೇಬೆಟ್ಟು, ಪ್ರ.ಕಾರ್ಯದರ್ಶಿ ಸಂದೇಶ್ ಪ್ರಭು ಉಪಸ್ಥಿತರಿದ್ದರು. ಉಡುಪಿಯ ಇಂದ್ರಾಳಿಯ ಉಪವನ ನರ್ಸರಿ ಸಂಸ್ಥೆಯು ಈ ಕಾರ್ಯಕ್ರಮದ ಸಹಭಾಗಿತ್ವ ವಹಿಸಿ ಎಲ್ಲಾ ಸಸ್ಯಗಳ ಪೂರೈಕೆಯನ್ನು ಮಾಡುತ್ತಿದೆ.

ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳೆ ಕೊಡಗಿನ ಮಗಳು, 10 ವರ್ಷದ

PREV
Read more Articles on
click me!

Recommended Stories

ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು
ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ, ಬಲೂನ್ ವ್ಯಾಪಾರಿ ಸಾವು, ಕೆಲ ಪ್ರವಾಸಿಗರ ಸ್ಥಿತಿ ಗಂಭೀರ