ಹಿಜಾಬ್‌ಗೆ ಪ್ರತಿಯಾಗಿ ಕೇಸರಿ ಶಾಲು: ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

By Kannadaprabha News  |  First Published Dec 26, 2023, 5:37 AM IST

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ಇರಬೇಕೆಂಬ ದೃಷ್ಟಿಯಲ್ಲಿ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಬರುವುದು ಶಿಕ್ಷಣಕ್ಕೆ. ಇಲ್ಲಿ ಜಾತಿ, ಮತ, ಧರ್ಮಗಳು ಮುಖ್ಯವಲ್ಲ, ಶಾಲೆಯೊಳಗೆ ಹಿಜಾಬ್ ಹಾಕಿಕೊಂಡು ಬಂದು ಧರ್ಮ ತರಬೇಡಿ ಎಂದು ಆಗ್ರಹಿಸಿದ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್
 


ಉಡುಪಿ(ಡಿ.26):  ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮತ್ತೆ ಹಿಜಾಬ್ ಧರಿಸಲು ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ಇರಬೇಕೆಂಬ ದೃಷ್ಟಿಯಲ್ಲಿ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಬರುವುದು ಶಿಕ್ಷಣಕ್ಕೆ. ಇಲ್ಲಿ ಜಾತಿ, ಮತ, ಧರ್ಮಗಳು ಮುಖ್ಯವಲ್ಲ, ಶಾಲೆಯೊಳಗೆ ಹಿಜಾಬ್ ಹಾಕಿಕೊಂಡು ಬಂದು ಧರ್ಮ ತರಬೇಡಿ ಎಂದು ಆಗ್ರಹಿಸಿದರು.

Tap to resize

Latest Videos

undefined

ಬಿಜೆಪಿಯವರು ಹಿಜಾಬ್‌ ವಿಚಾರದಲ್ಲಿ ಸಲ್ಲದ ಟೀಕೆ ಬಿಡಿ: ಸಚಿವ ಮಧು ಬಂಗಾರಪ್ಪ

ಹಿಜಾಬ್ ಹಾಕಲು ಅವಕಾಶ ಕೊಟ್ಟರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು, ಕೇಸರಿ ಪಂಚೆ ತೊಟ್ಟು ಬರುತ್ತಾರೆ. ಆಗ ಕೇಸರಿ ಬಟ್ಟೆಗೂ ತರಗತಿಯೊಳಗೆ ಅವಕಾಶ ಕೊಡಬೇಕಾಗುತ್ತದೆ ಎಂದರು. 

click me!