ನಟಿ ಶೃತಿ ಕಾರ್‌ ಡ್ರೈವರ್‌ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ?

By Suvarna News  |  First Published Dec 18, 2019, 12:49 PM IST

ನಟಿ ಶೃತಿ ಕಾರು ಚಾಲಕ ಆತ್ಮಹತ್ಯೆ|ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆದ ಘಟನೆ| ಕಳೆದ ಕೆಲವು ವರ್ಷಗಳಿಂದ ನಟಿ ಶೃತಿ ಮತ್ತು ನಟ ಶರಣ್ ಕಾರ್‌ಗೆ ಮಂಜುನಾಥ್ ಸಿಂಗ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು| ಮಂಜುನಾಥ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು|


ಬೆಂಗಳೂರು(ಡಿ.18): ಕನ್ನಡದ ಹಿರಿಯ ನಟಿ ಶೃತಿ ಅವರ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಇಂದು(ಬುಧವಾರ) ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಂಜುನಾಥ್ ಸಿಂಗ್ ಎಂದು ಗುರುತಿಸಲಾಗಿದೆ. 

Tap to resize

Latest Videos

undefined

ಕಳೆದ ಕೆಲವು ವರ್ಷಗಳಿಂದ ನಟಿ ಶೃತಿ ಮತ್ತು ನಟ ಶರಣ್ ಕಾರ್‌ಗೆ ಮಂಜುನಾಥ್ ಸಿಂಗ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಏಕಾಏಕಿ ಮಂಜುನಾಥ್ ಮಾಗಡಿ ರಸ್ತೆಯ ಫಾರೆಸ್ಟ್‌ ಗೇಟ್‌ನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಕಡಬಗೆರೆಯಲ್ಲಿ ಮಂಜುನಾಥ್ ಅವರು ಪಾರ್ಟಿ ಮಾಡಿದ್ದರು ಎಂದು ತಿಳಿದು ಬಂದಿದೆ. ಮಂಜುನಾಥ್ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಡಿಸೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!