BELAGAVI: ರಾಯಣ್ಣ ಭಾವಚಿತ್ರ ಹರಿದ ಕಿಡಿಗೇಡಿಗಳು; ರೊಚ್ಚಿಗೆದ್ದ ರಾಯಣ್ಣ ಅಭಿಮಾನಿಗಳಿಂದ ಟಯರ್‌ಗೆ ಬೆಂಕಿ!

By Ravi Nayak  |  First Published Aug 20, 2022, 4:12 PM IST
  •  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು 
  •  ಕಿಡಿಗೇಡಿಗಳ ವಿಕೃತಿಗೆ ಸಿಡಿದೆದ್ದ ರಾಯಣ್ಣ ಅಭಿಮಾನಿಗಳು
  •  ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಗೋಕಾಕ ಪೊಲೀಸರು

ವರದಿ: ಮಹಾಂತೇಶ ಕುರಬೇಟ್, ಏಷ್ಯಾನೆಟ್ ಸುವರ್ಣನ್ಯೂಸ್, ಬೆಳಗಾವಿ

ಬೆಳಗಾವಿ (ಆ.20): ರಾಜ್ಯದ ಕೆಲವೆಡೆ ಸಾವರ್ಕರ್, ಟಿಪ್ಪು ಸುಲ್ತಾನ್(Tippu Sultan) ಭಾವಚಿತ್ರ ಹರಿದು ಕಿಡಿಗೇಡಿಗಳು ವಿಕೃತಿ ಮೆರೆದ ಪ್ರಕರಣ ಮಾಸುವ ಮುನ್ನವೇ ಗೋಕಾಕ(Gokak) ತಾಲೂಕಿನ ಖನಗಾಂವ (Khangav)ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ(Sangolli Rayanna) ಭಾವಚಿತ್ರ ಇರುವ ಫ್ಲೆಕ್ಸ್(Flex) ಹರಿದು ಕಿಡಿಗೇಡಿಗಳು ಉದ್ಧಟತನ ಪ್ರದರ್ಶಿಸಿದ್ದಾರೆ‌.

Latest Videos

undefined

India@75: ಹುತಾತ್ಮ ರಾಯಣ್ಣನ ಚರಿತ್ರೆ ಹೇಳುವ ಬೆಳಗಾವಿಯ ನಂದಗಡ

 ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ತಡರಾತ್ರಿ‌ ಸಂಗೊಳ್ಳಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಹರಿದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗ್ರಾಮದ ವೃತ್ತಕ್ಕೆ  ರಾಯಣ್ಣ ವೃತ್ತ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರ ಇರುವ ಫ್ಲೆಕ್ಸ್ ಅಂಟಿಸಿ ಹಾಕಲಾಗಿತ್ತು. ತಡರಾತ್ರಿ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದು ಬೆಳಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಯಣ್ಣನ ಅಭಿಮಾನಿಗಳು ರೊಚ್ಚಿಗೆದ್ದಿದ್ದರು.

 ಕಿಡಿಗೇಡಿಗಳ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಸಿದ ರಾಯಣ್ಣನ ಅಭಿಮಾನಿಗಳು ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ಕಿಡಿಗೇಡಿಗಳ ಬಂಧನಕ್ಕೆ ಪಟ್ಟು ಆಗ್ರಹಿಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ಸ್ಥಳದಲ್ಲೇ ಠಿಕಾಣಿ ಹೂಡಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಟಿಪ್ಪು ಸುಲ್ತಾನ್‌ ಬ್ಯಾನರ್‌ ಹರಿದ ಪ್ರಕರಣ, ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಿಡಿ!

click me!