ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಬಿಜೆಪಿ ಸರ್ಕಾರದ ಷಡ್ಯಂತ್ರ ಅಡಗಿದೆ| ನ್ಯಾಯಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಕಾಣದ ಶಕ್ತಿಗಳು ಕೆಲಸ ಮಾಡಿವೆ| ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ| ನಮ್ಮ ಪಕ್ಷ ರೈತರ ಪರವಾಗಿದ್ದು, ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಸತೀಶ್ ಜಾರಕಿಹೊಳಿ|
ಯಾದಗಿರಿ(ಜ.28): ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮಂತ್ರಿಗಳ ಖಾತೆ ಹಂಚಿಕೆ ಪಕ್ಷಾಂತರಿಗಳಿಗೆ ಮಣೆ ಹಾಕಿ ದೊಂಬರಾಟ ಮಾಡುವ ಹಾಗೂ ವೈಫಲ್ಯದಿಂದ ಕೂಡಿದ ಸರ್ಕಾರವಾಗಿದೆ ಎಂದು ಮಾಜಿ ಸಚಿವ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.
ತಾಲೂಕಿನ ಭೀಮರಾಯನಗುಡಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಿನ್ನೆ ನಡೆದ ಘಟನೆಯ ಹಿಂದೆ ಬಿಜೆಪಿ ಸರ್ಕಾರದ ಷಡ್ಯಂತ್ರ ಅಡಗಿದೆ. ನ್ಯಾಯಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಕಾಣದ ಶಕ್ತಿಗಳು ಕೆಲಸ ಮಾಡಿವೆ. ಯಾರೇ ಮಾಡಿದರೂ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ನಮ್ಮ ಪಕ್ಷ ರೈತರ ಪರವಾಗಿದ್ದು, ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.
ಬೆಳಗಾವಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವರ ಪಟ್ಟಿಯಲ್ಲಿ ನನ್ನ ಹೆಸರು ಇದೆ. ಇದರ ಬಗ್ಗೆ ಆಲೋಚನೆ ಮಾಡುತ್ತೇನೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ತೀರ್ಮಾನ ಪಕ್ಷಕ್ಕೆ ಬಿಟ್ಟದ್ದು. ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯವಾಗಿದೆ ಎಂದರು.
undefined
ಮದುವೆಗೆ ವಿರೋಧ: ನೇಣಿಗೆ ಕೊರಳೊಡ್ಡಿದ ಯುವ ಪ್ರೇಮಿಗಳು
ರಾಜ್ಯದಲ್ಲಿ ಎಸ್ಟಿ ಸಮುದಾಯಕ್ಕೆ ಈಗಿರುವ ಮೀಸಲಾತಿ ಸಾಕಾಗುವುದಿಲ್ಲ. ಮೀಸಲಾತಿ ಹೆಚ್ಚಿಸಲು ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದೆ. ಮೀಸಲಾತಿ ಹೆಚ್ಚಿಸುವ ತನಕ ನಮ್ಮ ಹೋರಾಟ ನಡೆಯುತ್ತಲೇ ಇರುತ್ತೆ. ಸಮಾಜದ ಗುರುಗಳ ನೇತೃತ್ವದಲ್ಲಿ ಸಮುದಾಯದ ಒಗ್ಗಟ್ಟಿನಿಂದ ಹೋರಾಟ ನಡೆಸಲಾಗುತ್ತಿದೆ ಎಂದರು.