ಬಾಲಚಂದ್ರ ಜಾರಕಿಹೊಳಿಯ 'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ' ಕೂಗಿಗೆ ನನ್ನ ಬೆಂಬಲವಿಲ್ಲ; ಸತೀಶ್ ಜಾರಕಿಹೊಳಿ

Sathish Kumar KH   | Kannada Prabha
Published : Nov 26, 2026, 10:55 AM IST
Balachandra Jarkiholi and Satish Jarkiholi

ಸಾರಾಂಶ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಸಚಿವ ಸತೀಶ್ ಜಾರಕಿಹೊಳಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಖಂಡ ಕರ್ನಾಟಕ ಉಳಿಯಬೇಕು ಹಾಗೂ ಬೆಳಗಾವಿ ಜಿಲ್ಲೆ ವಿಭಜನೆಗೆ ಮಾತ್ರ ತಮ್ಮ ಸಹಮತವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ (ನ.26): ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂಬ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆಗೆ ಸಚಿವ ಸತೀಶ ಜಾರಕಿಹೊಳಿ ಪರೋಕ್ಷ ತಿರುಗೇಟು ನೀಡಿದ್ದು, ಪ್ರತ್ಯೇಕ ರಾಜ್ಯ ರಚನೆಗೆ ನಮ್ಮ ಸಹಮತ ಇಲ್ಲ ಮತ್ತು ಅಖಂಡ ಕರ್ನಾಟಕ ಉಳಿಯಬೇಕು ಎಂಬುದೇ ನಮ್ಮ ಆಶಯ ಎಂದು ಸ್ಪಷ್ಟಪಡಿಸಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆಗಳನ್ನು ರಚಿಸುವುದಕ್ಕೆ ನಮ್ಮ ಸಹಮತವಿದೆ. ಆದರೆ, ಪ್ರತ್ಯೇಕ ರಾಜ್ಯ ರಚನೆಯ ವಿಚಾರದಲ್ಲಿ ನಮ್ಮ ನಿಲುವು ಭಿನ್ನವಾಗಿದೆ ಎಂದು ಹೇಳಿದರು.

ಸತೀಶ ಜಾರಕಿಹೊಳಿ ಮಾತುಗಳ ಪ್ರಮುಖ ಅಂಶಗಳು

ಪ್ರತ್ಯೇಕ ರಾಜ್ಯಕ್ಕೆ ವಿರೋಧ, ಜಿಲ್ಲೆ ವಿಭಜನೆಗೆ ಸಹಮತ: ಬೆಳಗಾವಿ ಜಿಲ್ಲೆ ವಿಭಜನೆಗೆ ಯಾವುದೇ ಅಪಸ್ವರವಿಲ್ಲ. ಆದರೆ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಸಹಮತವಿಲ್ಲ; ಮುಂದೇನಾಗಲಿದೆ ಎಂಬುದನ್ನು ಕಾದು ನೋಡೋಣ ಎಂದು ತಿಳಿಸಿದರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂಬ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಸವದಿ–ರಮೇಶ್ ಜಾರಕಿಹೊಳಿ ವಾಕ್ಸಮರ: ಸಚಿವ ಲಕ್ಷ್ಮಣ ಸವದಿ ಹಾಗೂ ತಮ್ಮ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ನಡುವಿನ ವಾಕ್ಸಮರ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರಿಬ್ಬರ ವೈಯಕ್ತಿಕ ಜಗಳವಾಗಿದ್ದು, ರಾಜ್ಯದ ಅಥವಾ ದೇಶದ ಸಮಸ್ಯೆಯಲ್ಲ. ಪರಸ್ಪರ ಟೀಕಿಸಿಕೊಂಡಿದ್ದು ಅಲ್ಲಿಗೆ ಸಮವಾಗಿದೆ; ಇಬ್ಬರೂ ಕುಳಿತುಕೊಂಡು ತಮ್ಮ ಸಮಸ್ಯೆಯನ್ನು ತಾವೇ ಬಗೆಹರಿಸಿಕೊಳ್ಳುತ್ತಾರೆ ಎಂದರು.

ರಾಜಕೀಯ ವಲಯದಲ್ಲಿ ಚರ್ಚೆ

ಮುಂಬರುವ ಬೆಳಗಾವಿ ವಿಧಾನಮಂಡಲ ಅಧಿವೇಶನದ ಹೊಸ್ತಿಲಲ್ಲೇ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಬಾಲಚಂದ್ರ ಜಾರಕಿಹೊಳಿ ಹೇಳಿಕೆಗೆ ಸತೀಶ ಜಾರಕಿಹೊಳಿ ನೀಡಿರುವ ಪ್ರತಿಕ್ರಿಯೆ ಜಿಲ್ಲೆ ಹಾಗೂ ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದೆ.

PREV
Read more Articles on
click me!

Recommended Stories

Kodagu: ಕೊಡಗಿನಾದ್ಯಂತ ಪುತ್ತರಿ ಹಬ್ಬದ ಸಂಭ್ರಮ, ಧಾನ್ಯ ಲಕ್ಷ್ಮಿಯ ಮನೆ ತುಂಬಿಕೊಂಡ ರೈತರು
Bengaluru: ಇಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ; ಬೆಳಗ್ಗೆ 10 ರಿಂದ 5ರ ವರೆಗೂ ಪವರ್ ಕಟ್!