ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ ಜಾರಕಿಹೊಳಿ

By Kannadaprabha NewsFirst Published Feb 17, 2021, 8:52 AM IST
Highlights

ಬೆಳಗಾವಿ ಲೋಕಸಭಾ ಕ್ಷೇತ್ರ ಎದುರಿಸಲಿರುವ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದರೆ, ಕಾಂಗ್ರೆಸ್‌ ಮಾತ್ರ ಇತ್ತ ಹಿರಿಯ ಮುಖಂಡರನ್ನು ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆ ಎದುರಿಸಲು ಸಜ್ಜಾಗಿದೆ. 

ಬೆಳಗಾವಿ (ಫೆ.17): ರೈಲ್ವೆ ಖಾತೆ ಸಚಿವರಾಗಿದ್ದ ದಿ.ಸುರೇಶ್‌ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಎದುರಿಸಲಿರುವ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದರೆ, ಕಾಂಗ್ರೆಸ್‌ ಮಾತ್ರ ಕ್ಷೇತ್ರದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ಮತಗಳ ಮೇಲೆ ಕಣ್ಣಿಟ್ಟಿದ್ದು, ಆ ಸಮುದಾಯದ ಪ್ರಭಾವಿ ಮುಖಂಡರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸುತ್ತಿದೆ.

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಗೋಕಾಕ್‌ ನಗರದಲ್ಲಿನ ವೀರಶೈವ ಲಿಂಗಾಯತ ಪ್ರಭಾವಿ ನಾಯಕರನ್ನು ಭೇಟಿಯಾಗಿ ಕಾಂಗ್ರೆಸ್‌ ಸೇರುವಂತೆ ಆಹ್ವಾನ ನೀಡಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದು ಈಗ ಬೇರೆ ಪಕ್ಷಗಳತ್ತ ವಲಸೆ ಹೋಗಿರುವವರನ್ನು ಹಾಗೂ ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ನತ್ತ ಸೆಳೆಯಲು ಅವರು ಮುಂದಾಗಿದ್ದಾರೆ.

24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಸಚಿವ ...

ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯತ ಸಮಾಜವೇ ಪ್ರಬಲವಾಗಿದ್ದು, ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ವೀರಶೈವ ಲಿಂಗಾಯತ ಮುಖಂಡರನ್ನು ಭೇಟಿಯಾಗಿ ಕಾಂಗ್ರೆಸ್‌ನತ್ತ ಸೆಳೆಯುವ ತಂತ್ರಗಾರಿಕೆ ನಡೆಸುತ್ತಿದ್ದಾರೆ.

click me!