ಕಾಂಗ್ರೆಸ್‌ನಲ್ಲಿ ಮೂಲೆ ಗುಂಪು: ಜಾರಕಿಹೊಳಿ ಪ್ರತಿಕ್ರಿಯೆ

By Kannadaprabha NewsFirst Published Mar 3, 2021, 12:13 PM IST
Highlights

ಮಹದಾಯಿ ಸಮಸ್ಯೆ ಬಗೆಹರಿಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ನಾನಾ ಇಲಾಖೆ ಅನುಮತಿ ಬೇಕಿದೆ. ಮೂರು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದ ಸತೀಶ್‌ ಜಾರಕಿಹೊಳಿ 
 

ಬೆಳಗಾವಿ(ಮಾ.03): ಕಾಂಗ್ರೆಸ್‌ನಲ್ಲಿ ಯಾರನ್ನು ಯಾರೂ ಮೂಲೆ ಗುಂಪು ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. 

ಸಿದ್ದರಾಮಯ್ಯ, ಡಿಕೆಶಿ ಬಣದ ನಡುವೆ ಒಡಕು ಮೂಡಿರುವ ವಿಚಾರವಾಗಿ ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಬೆಂಗಳೂರು ಲೆವೆಲ್‌, ನಮ್ಮ ಜಿಲ್ಲೆಗೇನು ಸಂಬಂಧ? ಯಾರನ್ಯಾರೂ ಮೂಲೆಗುಂಪು ಮಾಡೋಕೆ ಆಗಲ್ಲ, ಆ ರೀತಿ ಯಾರೂ ಇಲ್ಲ ಇಲ್ಲಿ ಎಂದರು. 

ರಮೇಶ್ ಜಾರಕಿಹೊಳಿ ಹಸಿಬಿಸಿ ವಿಡಿಯೋ ರಿಲೀಸ್: ​ಸಂದಿಗ್ಧತೆಗೆ ಸಿಲುಕಿದ ಸಿಎಂ

ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್‌ ಜಾರಕಿಹೊಳಿ ಹಸ್ತಕ್ಷೇಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಕೆಡಿಪಿ ಸಭೆಯಲ್ಲಿ ಪ್ರಶ್ನಿಸುವ ಅವಕಾಶವಿದೆ ಎಂದರು. ಮಹದಾಯಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹದಾಯಿ ಸಮಸ್ಯೆ ಬಗೆಹರಿಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ನಾನಾ ಇಲಾಖೆ ಅನುಮತಿ ಬೇಕಿದೆ. ಮೂರು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
 

click me!