ಸವದತ್ತಿ ಎಲ್ಲಮ್ಮನ ಭಕ್ತರಿಗೆ ಇನ್ಮುಂದೆ ದೇವಾಲಯ ಪ್ರವೇಶಾವಕಾಶ

Kannadaprabha News   | Asianet News
Published : Feb 01, 2021, 07:01 AM IST
ಸವದತ್ತಿ ಎಲ್ಲಮ್ಮನ ಭಕ್ತರಿಗೆ  ಇನ್ಮುಂದೆ ದೇವಾಲಯ ಪ್ರವೇಶಾವಕಾಶ

ಸಾರಾಂಶ

ಇಂದಿನಿಂದ ಸವದತ್ತಿ ಎಲ್ಲಮ್ಮನ ದೇವಾಲಯದಲ್ಲಿ ಭಕ್ತರಿಗೆ ಮುಕ್ತ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಇನ್ಮುಂದೆ ಆವದೇ ನಿರ್ಬಂಧಗಳಿರುವುದಿಲ್ಲ

ಬೆಳಗಾವಿ (ಫೆ.01): ಲಾಕ್‌ಡೌನ್‌ನಿಂದ ಬಂದಾಗಿದ್ದ ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಸುಮಾರು 10 ತಿಂಗಳ ಬಳಿಕ ಭಕ್ತರಿಗೆ ತೆರೆದುಕೊಳ್ಳಲಿದೆ. ಜಿಲ್ಲಾಡಳಿತ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ಷರತ್ತುಬದ್ಧ ಅವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸಿದೆ. 

ಶ್ರೀದೇವಿಯ ಎಲ್ಲ ಪ್ರಮುಖ ಉತ್ಸವ ಜಾತ್ರೆಗಳನ್ನು ಮುಂದಿನ ಆದೇಶದವರೆಗೆ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ಸೂಚನೆ ನೀಡಲಾಗಿದೆ. ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಸಾಮಾಜಿಕ ಅಂತರದೊಂದಿಗೆ ಸರದಿ ಸಾಲಿನಲ್ಲಿ ಬರುವಂತೆ ಸೂಚನೆ ನೀಡಲಾಗಿದೆ. ಮಾಸ್ಕ್‌ ಧರಿಸುವುದು, ಥರ್ಮಲ್‌ ಸ್ಕ್ಯಾ‌ನಿಂಗ್‌, ಸ್ಯಾನಿಟೈಸರ್‌ ಬಳಕೆಯನ್ನು ಕಡ್ಡಾಯವಾಗಿ ಬಳಸಲು ತಿಳಿಸಲಾಗಿದೆ.

ಈ ಗ್ರಾಮದ ಪ್ರತಿ ಮನೆಯಲ್ಲಿದ್ದಾರೆ ಶಿಕ್ಷಕರು!

ದೇವಾಲಯದ ಆವರಣದಲ್ಲಿ ಯಾವುದೇ ವಾಣಿಜ್ಯ ಸಂಕೀರ್ಣಗಳನ್ನು ಹಾಗೂ ಅಂಗಡಿ-ಮುಂಗಟ್ಟುಗಳನ್ನು ಆರಂಭಿಸಲು ಅನುಮತಿ ಇರುವುದಿಲ್ಲ. ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC