ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ : ಪಕ್ಷಿ ತಜ್ಞ, ಪರಿಸರವಾದಿ ಎಂ.ಕೆ. ಸಪ್ತ ಗಿರೀಶ್

By Kannadaprabha News  |  First Published Mar 21, 2024, 11:07 AM IST

ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಪಕ್ಷಿ ತಜ್ಞ, ಪರಿಸರವಾದಿ ಎಂ.ಕೆ. ಸಪ್ತ ಗಿರೀಶ್ ಸಲಹೆ ನೀಡಿದರು.


  ಮೈಸೂರು :  ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಪಕ್ಷಿ ತಜ್ಞ, ಪರಿಸರವಾದಿ ಎಂ.ಕೆ. ಸಪ್ತ ಗಿರೀಶ್ ಸಲಹೆ ನೀಡಿದರು.

ಪಟ್ಟಣದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಶಾಲೆ) ಆವರಣದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ

Latest Videos

undefined

ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬ ಆಚರಿಸಲಾಯಿತು. ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರನ್ನು ಹಾಕುವ ಮೂಲಕ ಚಾಲನೆ ನೀಡಿ, ಪಕ್ಷಿಗಳಿಗೆ ಪೋಷಣೆಯ ಕಾಳಜಿಯೊಂದಿಗೆ ಪ್ರತಿ ಮಕ್ಕಳು ತಮ್ಮ ಮನೆಯಲ್ಲಿ ನೀರಿನ ಬಟ್ಟಲು ಇಡುವಂತೆ ವಿತರಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ ಎಂದರು.

ಇಂದು ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾಯುತ್ತಿದೆ. ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿವು. ಮನುಷ್ಯರು ನಾವು ಮಾತ್ರ ಬದುಕದೆ, ಎಲ್ಲ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕೆಂದು ಹೇಳಿದರು.

ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ

ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದೆ. ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ ಎಂದರು. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಗುಬ್ಬಿ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣ. ಗುಬ್ಬಿಯ ಸಂಕುಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಸಮಾಜ ಸೇವಕ ಕೆ. ರಘುರಾಮ್ ವಾಜಪೇಯಿ ಮಾತನಾಡಿ, ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಆದರೆ ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ ಎಂದರು.

ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ, ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ ಎಂಬ ಘೋಷವಾಕ್ಯ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕ ಡಾ.ಆರ್.ಎಚ್. ಪವಿತ್ರ,

ಪರಿಸರ ಪ್ರೇಮಿ ಶ್ರೀನಿವಾಸ್ ಭಾಷ್ಯಂ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್, ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್ , ದಿವ್ಯಾ ಭಾಗವಹಿಸಿದ್ದರು.

click me!