ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಸಂಬಂಧ ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯನ್ನು ಶೀಘ್ರವೇ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ, ಎಸ್.ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಚಿಕ್ಕಮಗಳೂರು (ಸೆ.12) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಸಂಬಂಧ ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯನ್ನು ಶೀಘ್ರವೇ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ, ಎಸ್.ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಇಲ್ಲಿನ ತಾಲೂಕು ಕಚೇರಿ ಆವರಣದಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಮಳೆಯಲ್ಲೇ ಮೆರವಣಿಗೆ ನಡೆಸಿ, ಬಹಿರಂಗ ಸಭೆ ನಡೆಸಿ ಮೀಸಲು ಹೆಚ್ಚಳ ಸಂಬಂಧ ನಿರ್ಲಕ್ಷ್ಯ ತೋರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಮುಖಂಡರು ಮತ್ತು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಾಲ್ಮೀಕಿ ಸಮುದಾಯಕ್ಕೆ ಶೀಘ್ರ ಸಿಹಿ ಸುದ್ದಿ: ಸಚಿವ ರಾಮುಲು
1958ರಲ್ಲಿ ಸರ್ಕಾರ ಮೀಸಲಾತಿ ನಿಗದಿಪಡಿಸುವ ಸಂದರ್ಭದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರ ಜನಸಂಖ್ಯೆ ವಿರಳವಾಗಿತ್ತು. 2011ರ ಜನಗಣತಿಯಂತೆ ಪರಿಶಿಷ್ಟಜಾತಿ ಜನಸಂಖ್ಯೆ 1.4 ಕೋಟಿ ಜನಸಂಖ್ಯೆಯನ್ನು ಒಳಗೊಂಡಿದೆ. ಪರಿಶಿಷ್ಟಪಂಗಡ ಜನಸಂಖ್ಯೆ 42 ಲಕ್ಷದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಪರಿಶಿಷ್ಟಜಾತಿ ಶೇ.17.15 ಹಾಗೂ ಪರಿಶಿಷ್ಟಪಂಗಡ ಶೇ.7ರಷ್ಟಿದೆ. 1958ರಿಂದ ಅಷ್ಟೇ ಪ್ರಮಾಣದ ಮೀಸಲು ಇದ್ದು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಭಾರಿ ಅನ್ಯಾಯ ಆಗುತ್ತಿದೆ ಎಂದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಸೌಲಭ್ಯ ಹೆಚ್ಚಳಕ್ಕೆ ಆಗ್ರಹಿಸಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಶ್ರೀ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯಿಂದ ಬೆಂಗಳೂರಿಗೆ ಅಂದಾಜು 400 ಕಿ.ಮೀ. ಪಾದಯಾತ್ರೆ ನಡೆಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡರು. ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೇವಲ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಇಚ್ಛಾಶಕ್ತಿಯನ್ನು ತೋರಲಿಲ್ಲ. ಸರ್ಕಾರದ ಈ ನಡೆಯ ವಿರುದ್ಧ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸತ್ಯಾಗ್ರಹಕ್ಕೆ ರಾಜಕೀಯ, ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಸರ್ಕಾರ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದೆ ಎಂದ ಅವರು, ರಾಜ್ಯ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ
ಪ್ರತಿಭಟನೆಯಲ್ಲಿ ಕರ್ನಾಟಕ ಪರಿಶಿಷ್ಟಜಾತಿ ಮತ್ತು ಪಂಗಡ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಆದರ್ಶ ಯಲ್ಲಪ್ಪ, ಎಸ್.ಸಿ., ಎಸ್.ಟಿ. ಅಲೆಮಾರಿ ಮತ್ತು ಬುಡಕಟ್ಟು ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್, ವಾಲ್ಮೀಕಿ ಯುವ ವೇದಿಕೆ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ, ಡಿಎಸ್‌ಎಸ್ ಮುಖಂಡರಾದ ಮರ್ಲೆ ಅಣ್ಣಯ್ಯ, ಮೋಹನ್ ಕಬ್ಬಿಗೆರೆ, ಮೋಹನ್ ಅದರವಳ್ಳಿ, ಕೀರ್ತಿ ಶಂಕರಪುರ ಪಾಲ್ಗೊಂಡಿದ್ದರು.