Free Blood: ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ರಕ್ತ ಒದಗಿಸುವ ಯೋಜನೆ; ಮುಂದಿನ ವರ್ಷದಿಂದಲೇ ಯೋಜನೆ ಜಾರಿ

Published : Sep 21, 2026, 10:18 AM IST
BPL Card

ಸಾರಾಂಶ

ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಗರ್ಭಿಣಿಯರು ಹಾಗೂ ಜಿಲ್ಲೆಯ ಬಿಪಿಎಲ್ ಕಾರ್ಡ್‌ದಾರರಿಗೆ ರೆಡ್‌ಕ್ರಾಸ್‌ನಿಂದ ಉಚಿತ ರಕ್ತ ಒದಗಿಸುವ ಯೋಜನೆ ಮುಂದಿನ ವರ್ಷ ಜಾರಿಯಾಗಲಿದೆ. ಇದರ ಜೊತೆಗೆ ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಮಂಗಳೂರು ಸೆ.21: ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ದಾಖಲಾಗುವ ಗರ್ಭಿಣಿಯರು ಸಹಿತ ಅವಶ್ಯ ಇರುವ ರೋಗಿಗಳಿಗೆ ರೆಡ್‌ಕ್ರಾಸ್ ಬ್ಲಡ್‌ಬ್ಯಾಂಕ್‌ನಿಂದ ಉಚಿತವಾಗಿ ರಕ್ತ ಪೂರೈಸಲಾಗುತ್ತದೆ. ಜಿಲ್ಲೆಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಿಪಿಎಲ್ ಕಾರ್ಡ್‌ ದಾರರಿಗೆ ರೆಡ್‌ಕ್ರಾಸ್‌ನಿಂದ ಉಚಿತವಾಗಿ ರಕ್ತ ಒದಗಿಸುವ ಯೋಜನೆ ರೂಪಿಸಲಾಗಿದ್ದು, ಮುಂದಿನ ವರ್ಷ ಕಾರ್ಯಗತವಾಗಲಿದೆ ಎಂದು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಹೇಳಿದರು.

ದ.ಕ. ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಮಣ್ಣಗುಡ್ಡೆ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ ಉದ್ಘಾಟನೆ

ವಕೀಲ ರಾಮ್‌ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕರಾದ ರಾಘವೇಂದ್ರ ರಾವ್ ಸ್ವತಃ ರಕ್ತ ನೀಡುವ ಮೂಲಕ ರಕ್ತದಾನಕ್ಕೆ ಚಾಲನೆ ನೀಡಿದರು. ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಣ್ಣಗುಡ್ಡೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್‌ಚಂದ್ರ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಕೆಎಂಸಿ ಆಸ್ಪತ್ರೆಯ ಡಾ. ಕಿಶನ್ ಪ್ರೇಮ್, ಡಾ. ಸಾಹಿಕ್ತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಯ್ಯಾದಿ, ಕೋಶಾಧಿಕಾರಿ ಸತೀಶ್ ಪೂಜಾರಿ ಉರ್ವ, ಸ್ಥಾಪಕ ಅಧ್ಯಕ್ಷ ಮೋಹನ್ ಆತ್ತಾವರ, ಲೋಕೇಶ್ ಸುರತ್ಕಲ್, ದಿನೇಶ್ ಕುಂಜತ್ತಬೈಲ್, ಕಿರಣ್ ಲೇಡಿಹಿಲ್, ರಾಜೇಶ್ ಇದ್ದರು. ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಶೋಕನಗರ ಸ್ವಾಗತಿಸಿದರು. ಆಂತರಿಕ ಲೆಕ್ಕಪರಿಶೋಧಕ ರೆಹಮಾನ್ ಖಾನ್ ಕುಂಜತ್ತಬೈಲ್ ನಿರೂಪಿಸಿದರು.

ಕೆಎಂಸಿ ಆಸ್ಪತ್ರೆ, ಪ್ರಸಾದ್ ನೇತ್ರಾಲಯ, ಶ್ರೀನಿವಾಸ್ ಹಾಸ್ಪಿಟಲ್ ಮುಕ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮತ್ತು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಸಹಭಾಗಿತ್ವದಲ್ಲಿ ಶಿಬಿರ ನಡೆಯಿತು.

PREV
Read more Articles on
click me!

Recommended Stories

ತಮಿಳುನಾಡಿನಲ್ಲಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿಗೆ ಅಪ್ಪಳಿಸಿದ ಬಂಡೆ, ತಪ್ಪಿತು ಮಹಾ ದುರಂತ!
ಬಿಜೂರು ರೈಲು ನಿಲ್ದಾಣಕ್ಕೆ ನಿಲುಗಡೆ: 30 ವರ್ಷಗಳ ಹೋರಾಟಕ್ಕೂ ಫಲಿತಾಂಶ ಶೂನ್ಯ!