ವಿಜಯಪುರ: ನಿಡಗುಂದಿ ಬಳಿ ಲಾರಿಗೆ ಡಿಕ್ಕಿ ಹೊಡೆದ ಶಾಲಾ ಬಸ್

Suvarna News   | Asianet News
Published : Feb 01, 2020, 11:43 AM IST
ವಿಜಯಪುರ: ನಿಡಗುಂದಿ ಬಳಿ ಲಾರಿಗೆ ಡಿಕ್ಕಿ ಹೊಡೆದ ಶಾಲಾ ಬಸ್

ಸಾರಾಂಶ

ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಶಾಲಾ ವಾಹನ| ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ| ಜಿಲ್ಲೆಯ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ(50) ರಲ್ಲಿ ನಡೆದ ಘಟನೆ| ಗಾಯಾಳುನ್ನ ನಿಡಗುಂದಿ ತಾಲೂಕಾಸ್ಪತ್ರೆಗೆ ದಾಖಲು| 

ವಿಜಯಪುರ(ಫೆ.01): ಲಾರಿಗೆ ಹಿಂಬದಿಯಿಂದ ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ(50) ರಲ್ಲಿ ಇಂದು(ಶನಿವಾರ) ಬೆಳಗ್ಗೆ ನಡೆದಿದೆ. 

ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಜ್ಞಾನಭಾರತಿ ಶಾಲೆಗೆ ಸೇರಿದ ಶಾಲಾ ವಾಹನ ವಿಜಯಪುರಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ನಿಡಗುಂದಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವಿಜಯಪುರದಲ್ಲಿ ಕಾರ್ಯಕ್ರಮವೊಂದಕ್ಕೆ ವಿದ್ಯಾರ್ಥಿಗಳ ಪೋಷಕರನ್ನು ಶಾಲಾ ವಾಹನದಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು ಎಂದು ತಿಳಿದು ಬಂದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 
 

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!