ಮಕ್ಕಳ‌ ಕೈಯಿಂದ ರಾಖಿ ಬಿಚ್ಚಿಸಿದ ಕಾನ್ವೆಂಟ್ ಶಾಲೆ: ಹಿಂದೂ ಸಂಘಟನೆಗಳ ಪ್ರತಿಭಟನೆ

By Suvarna News  |  First Published Aug 18, 2022, 3:46 PM IST

ರಾಖಿ ಕಟ್ಟಿದ್ದ ಮಕ್ಕಳ ಕೈಯಿಂದ ರಾಖಿ ಬಿಚ್ಚಿಸಿ ಖಾಸಗಿ ಶಾಲೆಯೊಂದು ದರ್ಪ ತೋರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಕರಗಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.


ರಾಖಿ ಕಟ್ಟಿದ್ದ ಮಕ್ಕಳ ಕೈಯಿಂದ ರಾಖಿ ಬಿಚ್ಚಿಸಿ ಖಾಸಗಿ ಶಾಲೆಯೊಂದು ದರ್ಪ ತೋರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಕರಗಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ನಿನ್ನೆ ಕರಗಿನ ಕೊಪ್ಪದ ಲೊಯೋಲಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೆಳಗ್ಗೆ ಪ್ರಾರ್ಥನೆ ನಡೆದ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ರಾಖಿ ಬಿಚ್ಚಿಸಿದ್ದರು.‌ 

ಶಾಲೆಯಲ್ಲಿ ನಡೆದ ಈ ಘಟನೆಯನ್ನು ಪೋಷಕರಿಗೆ ವಿದ್ಯಾರ್ಥಿಗಳು ತಿಳಿಸಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು, ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಇಂದು ಶಾಲೆಯ ಮುಂಭಾಗ  ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಲೊಯೋಲಾ ಶಿಕ್ಷಣ ಸಂಸ್ಥೆಯ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಕ್ರಮಕ್ಕೆ ಒತ್ತಾಯಿಸಿದ್ದಲ್ಲದೇ, ಲೊಯೋಲಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರ ಜತೆ ಮಾತಿನ ಚಕಮಕಿಯೂ ನಡೆದಿದೆ.  ವಿಷಯವನ್ನು ಅರಿತ ಮುಂಡಗೋಡ ಪೊಲೀಸರು ಹಾಗೂ ಬಿಇಒ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸಿದ್ದಾರೆ.

Tap to resize

Latest Videos

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ಶಾಲಾ ಆಡಳಿತ ಮಂಡಳಿಯವರು ಸರ್ಕಾರದ ನಿಯಮದಂತೆ ನಡೆದುಕೊಳ್ಳಬೇಕು ಎಂದು ಬಿಇಒ ಸೂಚನೆ ನೀಡಿದೆ. ಈ ಹಿನ್ನೆಲೆ ಕೊನೆಗೆ ಲೋಯೊಲಾ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರು ಕ್ಷಮೆ ಕೇಳಿದ್ದಾರೆ. ಸಂಸ್ಥೆಯ ಮುಖ್ಯಸ್ಥರು ಕ್ಷಮೆ ಕೇಳಿದ ನಂತರ ಹಿಂದೂಪರ ಸಂಘಟನೆಗಳು, ಪೋಷಕರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರಿನ ಶಾಲೆಯೊಂದರಲ್ಲಿ ಇಂತಹ ಘಟನೆ ನಡೆದಿತ್ತು. ಮಕ್ಕಳ ಕೈಯಲ್ಲಿದ್ದ ರಾಕಿಯನ್ನು ಶಿಕ್ಷಕಿ ಬಿಚ್ಚಲು ಹೇಳಿದ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು, ನಂತರ ಶಾಲಾಡಳಿತ ಮಂಡಳಿ ಕ್ಷಮೆ ಕೇಳಿತ್ತು. 

ಕೈಗೆ ರಕ್ಷೆ ಕಟ್ಟುವಾಗ ತಪ್ಪಿಯೂ ಈ ತಪ್ಪುಗಳನ್ನು ಮಾಡ್ಬೇಡಿ..

click me!