ಎಸ್‌ಸಿಪಿ ಯೋಜನೆ ಶೇ.92ರಷ್ಟು ಪ್ರಗತಿ: ಡೀಸಿ

By Kannadaprabha News  |  First Published Mar 30, 2023, 6:29 AM IST

ತುಮಕೂರು ಜಿಲ್ಲೆಯ ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯಕ್ಕೆ ಎಸ್‌ಸಿಪಿ ಯೋಜನೆಯಡಿ ಶೇಕಡಾ 92ರಷ್ಟುಹಾಗೂ ಟಿಎಸ್‌ಪಿ ಯೋಜನೆಯಡಿ ಶೇಕಡಾ 85ರಷ್ಟುಪ್ರಗತಿಯನ್ನು ಸಾಧಿಸಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದರು.


  ತುಮಕೂರು : ತುಮಕೂರು ಜಿಲ್ಲೆಯ ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯಕ್ಕೆ ಎಸ್‌ಸಿಪಿ ಯೋಜನೆಯಡಿ ಶೇಕಡಾ 92ರಷ್ಟು ಹಾಗೂ ಟಿಎಸ್‌ಪಿ ಯೋಜನೆಯಡಿ ಶೇಕಡಾ 85ರಷ್ಟು ಪ್ರಗತಿಯನ್ನು ಸಾಧಿಸಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಸಾಧನೆ ಕುರಿತು ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಗತಿ ಕುಂಠಿತವಾಗಿರುವ ಇಲಾಖೆಗಳು ಮಾಚ್‌ರ್‍ ಅಂತ್ಯದೊಳಗೆ ಪ್ರಗತಿ ಸಾಧಿಸಲು ಸೂಚಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗುವುದು. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಹಣವನ್ನು ಶೇಕಡಾ 100ರಷ್ಟುಬಳಕೆ ಮಾಡದ ಇಲಾಖೆಯ ಅಧಿಕಾರಿಗಳು ಲಿಖಿತ ರೂಪದಲ್ಲಿ ಸರಿಯಾದ ಕಾರಣವನ್ನು ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಹಣವನ್ನು ಸಂಬಂಧಿಸಿದ ಸಮುದಾಯದ ಅಭಿವೃದ್ಧಿಗಾಗಿ ಮಾತ್ರ ಉಪಯೋಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು,ಯೋಜನೆಯ ಹಣವನ್ನು ಶೇಕಡಾ 100ರಷ್ಟುಬಳಕೆ ಮಾಡಿದ ಇಲಾಖೆಗಳನ್ನು ಅಭಿನಂದಿಸಿದರು.

Tap to resize

Latest Videos

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ರವೀಶ್‌, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್‌. ಶ್ರೀಧರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ, ಕಾರ್ಮಿಕ ಅಧಿಕಾರಿ ರಮೇಶ್‌ ಮತ್ತಿತರ ಯೋಜನಾ ಅನುಷ್ಠಾನ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೀಸಲಿನಿಂದ ತೆಗೆದಿಲ್ಲ

ಬೆಂಗಳೂರು (ಮಾ.30): ಪರಿಶಿಷ್ಟ ಜಾತಿ ಪಟ್ಟಿಯಿಂದ ಕೆಲವು ಸಮುದಾಯಗಳನ್ನು ಕೈಬಿಡಲಾಗಿದೆ ಎಂಬ ರಾಜಕೀಯ ಪ್ರೇರಿತ ಕುತಂತ್ರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್‌ನವರು ಸುಳ್ಳು ಮಾಹಿತಿ ಕೊಡುತ್ತಿದ್ದಾರೆ. ಬಂಜಾರ, ಭೋವಿ, ಕೊರಚ ಯಾರನ್ನೂ ಕೂಡ ಪಟ್ಟಿಯಿಂದ ತೆಗೆಯಲಾಗುವುದಿಲ್ಲ. ಈ ಬಗ್ಗೆ ಫೆಬ್ರವರಿ ಮಾಹೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಇವೆಲ್ಲ ಮಹಾರಾಜರ ಕಾಲದಿಂದಲೂ ಇರುವಂಥ ಸಮುದಾಯಗಳು. ಸಂವಿಧಾನ ಆದ ನಂತರ ಇದ್ದ ಆರು ಸಮುದಾಯಗಳಲ್ಲಿ ಇವೂ ಇದ್ದು, ತೆಗೆಯುವ ಪ್ರಶ್ನೆಯೇ ಇಲ್ಲ ಎಂಬುದನ್ನು ಆಧಾರ ಸಮೇತವಾಗಿ ನೀಡಲಾಗಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಮನೆ ಮೇಲೆ ದಾಳಿ ಕಾಂಗ್ರೆಸ್‌ ಕುತಂತ್ರ: ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆದಿದ್ದು ಬಿಜೆಪಿ ಕುತಂತ್ರ ಅಲ್ಲ. ಅದು ಕಾಂಗ್ರೆಸ್‌ ಕುತಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಪಿಎಂ ಮಿತ್ರ ಪಾರ್ಕ್ ಚಾಲನೆಗೆ ನಗರಕ್ಕೆ ಆಗಮಿಸಿದ ಅವರು ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆದಿದ್ದು ಬಿಜೆಪಿ ಕುತಂತ್ರ ಅಲ್ಲ. ಅದು ಕಾಂಗ್ರೆಸ್‌ ಕುತಂತ್ರ ಎಂದರು.

ಅಭಿವೃದ್ಧಿ ವಿಷಯದಲ್ಲಿ ನಾನು ಯಾವತ್ತೂ ಹಿಂದೆ ಬಿದ್ದಿಲ್ಲ: ಸಿ.ಟಿ.ರವಿ

ಗಲಭೆಯಲ್ಲಿ ಸಿಕ್ಕಿರುವವರು ಕಾಂಗ್ರೆಸ್‌ ನಾಯಕರು. ಕಾಂಗ್ರೆಸ್‌ ಅವರನ್ನು ತಪ್ಪು ದಾರಿಗೆ ಎಳೆದಿದೆ. ರಾತ್ರಿ ಸಭೆ ಮಾಡಿ ಜನರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ. ಡಿ.ಕೆ.ಶಿವಕುಮಾರ್‌ ಸುಳ್ಳು ಹೇಳೋದನ್ನು ಬಿಡಬೇಕು ಎಂದು ಹರಿಹಾಯ್ದರು. ಲಂಬಾಣಿ ಜನರನ್ನು ಎಸ್ಸಿ ಪಟ್ಟಿಯಿಂದ ತಗೆಯುತ್ತಾರೆ ಅಂತ ಸುಳ್ಳು ಸಂದೇಶ ರವಾನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಗಾಗಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಉತ್ತರ ನೀಡಿದ ಅವರು ಕಾಂಗ್ರೆಸ್‌ ಗೆ ಹೊಟ್ಟೆಕಿಚ್ಚು, ಅವರು ಮಾಡದೇ ಇರೋದನ್ನು ನಾವು ಮಾಡಿದ್ದೇವೆ. ಜವಲಿ ಪಾರ್ಕ್ನಿಂದ ಕಲಬುರಗಿಗೇ ವರದಾನವೇ ಆಗಿರೋದರಿಂದ ಜನ ಧನ್ಯವಾದ ಹೇಳುತ್ತಿದ್ದಾರೆಂದರು.

ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಸ್ಥಿತಿ ಚಿಂತಾಜನಕ: ಸಿ.ಎಂ.ಇಬ್ರಾಹಿಂ

ಕಾಂಗ್ರೆಸ್‌ ನಿಂದ ವಲಸೆ ಹೋದ ವರು ಮತ್ತೆ ಕಾಂಗ್ರೆಸ್‌ ಬರುತ್ತಾರೆ ಎಂಬ ಚಲುವ ನಾರಾಯಣ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಚಲುವ ನಾರಾಯಣ ಸ್ವಾಮಿಯೇ ವಲಸೆ ವ್ಯಕ್ತಿ, ಆತನ ಮಾತು ನಂಬೋಕೆ ಆಗುತ್ತಾ? ಎಂದು ಸವಾಲು ಹಾಕಿದರು. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಇಲ್ಲ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸ್ಪಷ್ಟವಾಗಿ ಹೇಳಿದ್ದಾರೆ, ಯಾರ ಜೊತೆ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

click me!