ಅನುದಾನಿತ ಶಿಕ್ಷಕರಿಗೂ ಜ್ಯೋತಿ, ಸಂಜೀವಿನಿ ವಿಸ್ತರಣೆಗೆ ಪರಿಶೀಲನೆ; ಸಿಎಂ ಭರವಸೆ

By Kannadaprabha News  |  First Published Dec 16, 2023, 6:03 AM IST

ಸರ್ಕಾರಿ ನೌಕರರಿಗೆ ಇರುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು (ಡಿ.16): ಸರ್ಕಾರಿ ನೌಕರರಿಗೆ ಇರುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಯನ್ನು ಅನುದಾನಿತ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಸ್ತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ನೌಕರರಿಗೆ 2015ರ ಜನವರಿಯಿಂದ ‘ಜ್ಯೋತಿ ಸಂಜೀವಿನಿ’ ಯೋಜನೆ ಜಾರಿಗೆ ತರಲಾಗಿದೆ. ಕ್ಯಾನ್ಸರ್‌, ಹೃದ್ರೋಗ ಸೇರಿದಂತೆ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಖರ್ಚಾದ ಹಣವನ್ನು ಸರ್ಕಾರ ಮರು ಪಾವತಿಸುತ್ತದೆ. ಈ ಯೋಜನೆಯನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರಿಗೂ ವಿಸ್ತರಿಸುವ ಬಗ್ಗೆ ಹಣಕಾಸು ಲಭ್ಯತೆ ನೋಡಿಕೊಂಡು ಪರಿಶೀಲಿಸಲಾಗುವುದು ಎಂದರು.

Tap to resize

Latest Videos

ವಿಜಯ್ ದಿವಸ: ಸಚಿವ ಆರ್‌ಸಿಯಿಂದ ಇಂದುಹುತಾತ್ಮ ಯೋಧರಿಗೆ ಗೌರವ

ಇದಕ್ಕೂ ಮುನ್ನ ಸದಸ್ಯೆ ಹೇಮಲತಾ ಅವರ ಒತ್ತಾಯಕ್ಕೆ ದನಿಗೂಡಿಸಿದ ವೈ.ಎ ನಾರಾಯಣಸ್ವಾಮಿ, ಮರಿತಿಬ್ಬೇಗೌಡ ಮತ್ತಿತರರು ಅನುದಾನಿತ ಶಿಕ್ಷಕರು, ಉಪನ್ಯಾಸಕರಿಗೆ ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಯೋಜನೆ ಸೇರಿದಂತೆ ಯಾವುದೇ ಆರೋಗ್ಯ ಯೋಜನೆ ಸಿಗದೇ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಅವರನ್ನು ಜ್ಯೋತಿ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದರು.

ಏರ್‌ಪೋರ್ಟ್‌ಗೆ ಮಹಾನ್‌ ವ್ಯಕ್ತಿಗಳ ಹೆಸರು: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರಾಜ್ಯದ ಮಹಾನ್‌ ವ್ಯಕ್ತಿಗಳ ಹೆಸರಿಡುವ ಮಹತ್ವದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಕೈಗೊಂಡಿದ್ದು, ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ತೀರ್ಮಾನಿಸಲಾಯಿತು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸದನವು ಸರ್ವಾನುಮತದಿಂದ ಒಪ್ಪಿಗೆ ನೀಡಿತು.

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಅವರು ವಿಮಾನ ನಿಲ್ದಾಣಗಳಿಗೆ ಮಹಾನ್‌ ವ್ಯಕ್ತಿಗಳ ಹೆಸರಿಡುವ ನಿರ್ಣಯವನ್ನು ಸದನದಲ್ಲಿ ಮಂಡಿಸಿದರು. ಇದಕ್ಕೆ ಪಕ್ಷಾತೀತವಾಗಿ ಸದಸ್ಯರು ಬೆಂಬಲ ಸೂಚಿಸಿದರು. ಬಳಿಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಸದಸ್ಯ ಅರವಿಂದ ಬೆಲ್ಲದ್ ಮಾತನಾಡಿ, ನಾಲ್ಕು ವಿಮಾನ ನಿಲ್ದಾಣಕ್ಕೆ ಮಹಾನ್‌ ವ್ಯಕ್ತಿಗಳ ಹೆಸರು ಇಡಲು ನಿರ್ಣಯ ಕೈಗೊಂಡಿರುವುದು ಮೆಚ್ಚುವಂತಹದ್ದು. ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ ಬಳಿಕ ಅಲ್ಲಿಂದ ಒಪ್ಪಿಗೆ ತರುವಂತಹ ಕೆಲಸವನ್ನು ಮಾಡುತ್ತೇವೆ ಎಂದರು. ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನ ಕೋನರೆಡ್ಡಿ, ಅಬ್ಬಯ್ಯ ಪ್ರಸಾದ್‌ ಅವರು ಸರ್ಕಾರದ ನಿರ್ಣಯವನ್ನು ಸ್ವಾಗತಿಸಿ ಬೆಂಬಲ ಸೂಚಿಸಿದರು.

ಬೆರಳುಗಳು ಇಲ್ಲದೇ ಇದ್ರೂ ಆಧಾರ್‌ ಸಾಧ್ಯ, ಇದೆ ಸರ್ಕಾರದ ನೋಟಿಫಿಕೇಶನ್: ರಾಜೀವ್‌ ಚಂದ್ರಶೇಖರ್‌!

ಮಂಗಳೂರು ಬಗ್ಗೆ ಚರ್ಚಿಸಿ ನಿರ್ಣಯ: ಇದೇ ವೇಳೆ ಸದಸ್ಯ ಸುನೀಲ್‌ ಕುಮಾರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡುವುದನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಆದರೆ, ಮಂಗಳೂರು ವಿಮಾನ ನಿಲ್ದಾಣಕ್ಕೆ ಅಬ್ಬಕ್ಕ ಹೆಸರು ಸಹ ಇಡುವ ಒತ್ತಾಯ ಇರುವ ಕಾರಣ ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದು ಉತ್ತಮ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಸಲಹೆ ನೀಡಿದರು. ನಂತರ ಸಚಿವ ಪಾಟೀಲ್‌, ಮುಂದಿನ ದಿನದಲ್ಲಿ ಕಲಬುರಗಿ, ಮೈಸೂರು, ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.))))

click me!