ಮುಂಬರುವ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಬೇಕು. ಪ್ರಜಾಪ್ರಭುತ್ವದ ಆಶಯ ಇರುವುದು ಬಹುಜನರು ಯಾರು ಇದ್ದಾರೆ ಅವರೇ ಅಧಿಕಾರಕ್ಕೆ ಬರಬೇಕು. ಸಂವಿಧಾನ ರಚನೆಯಾಗಿ 73 ವರ್ಷಗಳು ಗತಿಸಿವೆ. ಆದರೆ, ಶಾಸನ ಮಾಡುವ ಅಧಿಕಾರದಲ್ಲಿ ನಾವು ಇಲ್ಲ ಎಂದರೆ ಹೇಗೆ? ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.
ಬೆಳಗಾವಿ (ನ.29) : ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ 2023ಕ್ಕೆ ದಲಿತ ಮುಖ್ಯಮಂತ್ರಿ ಮಾಡಲು ಎಸ್‌ಸಿ, ಎಸ್‌ಟಿ ಸಮುದಾಯದ ಮಠಾಧೀಶರು ಸಂಕಲ್ಪ ಮಾಡಿದ್ದಾರೆ. ಸೋಮವಾರ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಸ್ವಾಭಿಮಾನಿ ಎಸ್‌ಟಿ, ಎಸ್‌ಸಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಠಾಧೀಶರ ಸಭೆ ನಡೆದಿದ್ದು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಮುಂಬರುವ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಬೇಕು. ಪ್ರಜಾಪ್ರಭುತ್ವದ ಆಶಯ ಇರುವುದು ಬಹುಜನರು ಯಾರು ಇದ್ದಾರೆ ಅವರೇ ಅಧಿಕಾರಕ್ಕೆ ಬರಬೇಕು. ಸಂವಿಧಾನ ರಚನೆಯಾಗಿ 73 ವರ್ಷಗಳು ಗತಿಸಿವೆ. ಆದರೆ, ಶಾಸನ ಮಾಡುವ ಅಧಿಕಾರದಲ್ಲಿ ನಾವು ಇಲ್ಲ ಎಂದರೆ ಹೇಗೆ? ಎಸ್‌ಸಿ, ಎಸ್‌ಟಿಯವರೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದರು.
ಬೆಳಗಾವಿ: ಸ್ವಾಮೀಜಿಗಳೊಂದಿಗೆ ಜಾರಕಿಹೊಳಿ ಗುಪ್ತಸಭೆ..!
ಈ ನಿಟ್ಟಿನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಮಠಾಧೀಶರು ಎಲ್ಲರೂ ಸೇರಿ ನಾವು ಸಂಕಲ್ಪ ಮಾಡಿದ್ದೇವೆ. ಎಸ್‌ಸಿ, ಎಸ್‌ಟಿ ಸಮುದಾಯವನ್ನು ಒಗ್ಗೂಡಿಸುವ ಕೆಲಸವನ್ನು ನಾವು ಮಾಡುತ್ತೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ನಾವು ಸಭೆಗಳನ್ನು ಮಾಡುತ್ತೇವೆ ಎಂದು ಹೇಳಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಚಿತ್ರದುರ್ಗ ಬಂಜಾರಾ ಗುರುಪೀಠದ ಸಂತ ಸೇವಾಲಾಲ ಸ್ವಾಮೀಜಿ, ಚಿತ್ರದುರ್ಗ ಮೇದಾರ ಕೇತೇಶ್ವರ ಗುರುಪೀಠದ ಬಸವಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿಗೆ ಆಗಮಿಸಿ ಮಹಾರಾಷ್ಟ್ರದ ನಿರ್ಲಕ್ಷ್ಯ ಧೋರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಜತ್ತ ಕನ್ನಡಿಗರು