ಕೊಡಗಿನಲ್ಲಿ ಸ್ವಯಂ ಪ್ರೇರಿತ ಬಂದ್, ನಿಷೇಧಾಜ್ಞೆ ಜಾರಿ

By Kannadaprabha News  |  First Published Dec 21, 2019, 8:31 AM IST

ಮಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿ ಕೊಡಗು ಜಿಲ್ಲೆಯ ಕೆಲವೆಡೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಯಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.


ಮಡಿಕೇರಿ(ಡಿ.21): ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಗೋಲಿಬಾರ್‌ಗೆ ಇಬ್ಬರು ಬಲಿಯಾದ ಘಟನೆ ಖಂಡಿಸಿ ಕೊಡಗು ಜಿಲ್ಲೆಯ ಕೆಲವೆಡೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನ ಸಿದ್ದಾಪುರ, ನೆಲ್ಯಹುದಿಕೇರಿ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದ ಸಂಜೆಯವರೆಗೆ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡುವ ಮೂಲಕ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.

Tap to resize

Latest Videos

ಹಿಂದೆ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸರು ಮತ್ತೆ ಮಂಗಳೂರಿಗೆ

ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮಡಿಕೇರಿ ನಗರದ ಜನರಲ್‌ ತಿಮ್ಮಯ್ಯ ವೃತದ ಬಳಿ ಕೆಎಸ್‌ಆರ್‌ಪಿ ತುಕಡಿಯನ್ನು ನೀಯೋಜನೆ ಮಾಡಲಾಗಿದ್ದು, ಮಡಿಕೇರಿ ನಗರದಲ್ಲಿ ಎಂದಿನಂತೆ ಜನ ಸಾಮಾನ್ಯರು ಓಡಾಡುತ್ತಿದ್ದರು. ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಯಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ: ಆರೋಪ

click me!