ಕೊರೋನಾ ಭೀತಿ: ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ

By Suvarna NewsFirst Published Mar 18, 2020, 3:09 PM IST
Highlights

ಕೊರೋನಾ ಭೀತಿ ಹೆಚ್ಚುತ್ತಿರುವಂತೆಯೇ ಉಡುಪಿಯಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಜಿ ಜಗದೀಶ್ ಪ್ರಕಟಣೆ ಹೊರಡಿಸಿದ್ದಾರೆ. ಜನರ ಓಡಾಟ ಕಡಿಮೆಯಾಗಿ, ಆದಷ್ಟೂ ಜನರು ಮನೆಯಲ್ಲೇ ಉಳಿಯುವಂತಗೆ ಮಾಡಲಾಗಿದೆ.

ಉಡುಪಿ(ಮಾ.18): ಕೊರೋನಾ ಭೀತಿ ಹೆಚ್ಚುತ್ತಿರುವಂತೆಯೇ ಉಡುಪಿಯಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಜಿ ಜಗದೀಶ್ ಪ್ರಕಟಣೆ ಹೊರಡಿಸಿದ್ದಾರೆ. ಜನರ ಓಡಾಟ ಕಡಿಮೆಯಾಗಿ, ಆದಷ್ಟೂ ಜನರು ಮನೆಯಲ್ಲೇ ಉಳಿಯುವಂತಗೆ ಮಾಡಲಾಗಿದೆ.

ಕರ್ನಾಟಕದಲ್ಲಿ  ಕರೋನಾ ವೈರಸ್ ಹಾವಳಿಯಿಂದ ಜನ ಕಂಗೆಟ್ಟಿದ್ದು, ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿ ಮಾಡಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಕರೋನಾ ವೈರಸ್ ಹರಡದಂತೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಾಗಿದೆ.

ಕೊರೋನಾ ಭೀತಿ: ಮಂಗಳೂರಲ್ಲಿ 51 ಜನರಿಗಾಗಿ ಹುಡುಕಾಟ

ಜನ ಸೇರುವ ಎಲ್ಲಾ ಕಾರ್ಯಕ್ರಮಗಳು ಸಂಪೂರ್ಣ ರದ್ದು ಮಾಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಿಗೆ ಅರ್ಚಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರ್ಮಿಕ ಕೇಂದ್ರಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶಕ್ಕೆ 

ಪೂಜೆ ಮತ್ತಿತರ ವಿಶೇಷ ಸೇವೆಗಳಿಗೆ ಅವಕಾಶ ನಿರಾಕರಿಸಲಾಗಿದೆ. ಚರ್ಚ್ ಮಸೀದಿ ದೇವಸ್ಥಾನಕ್ಕೆ ಗುಂಪು ಗುಂಪಿನಲ್ಲಿ ಭಕ್ತಾದಿಗಳು ಪ್ರವೇಶಿಸುವಂತಿಲ್ಲ.  
ಪ್ರವಾಸಿ ತಾಣಗಳು ತಕ್ಷಣದಿಂದ ಸಂಪೂರ್ಣವಾಗಿ ಸ್ತಬ್ಧವಾಗಬೇಕು. ವಾರದ ಸಂತೆಗಳಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ.

ಕೊರೋನಾ ಕಾಟ ಅಷ್ಟಿಷ್ಟಲ್ಲ: ಬರೀ ಕೆಮ್ಮಿದ್ದಕ್ಕೆ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ ಜನ!

ಹಾಸ್ಟೆಲ್ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಸೂಚನೆ ನೀಡಲಾಗಿದ್ದು, ಮುಂದಿನ ಆದೇಶ ಬರುವ ತನಕ ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆ ಹೊರಡಿಸಿದ್ದಾರೆ.

click me!