ನಾಳೆ (ಏ.07) ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ!

By Suvarna NewsFirst Published Apr 6, 2021, 5:04 PM IST
Highlights

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, (ಏ.06): ವಿವಿಧ ಬೇಡಿಕೆ ಈಡೇರಿಸುವಂತೆ ನಾಳೆ (ಏ.07) ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಎಲ್ಲಿಯೂ ಸಹ ಗುಂಪುಗೂಡುವಂತಿಲ್ಲ. ಯಾವುದೇ ರ್ಯಾಲಿ, ಧರಣಿ ಮಾಡುವಂತಿಲ್ಲ. ಯಾವುದೇ ಪಬ್ಲಿಕ್ ಪಂಕ್ಷನ್, ಗ್ರೂಪ್ ಸೆಲೆಬ್ರೇಷನ್ ಮಾಡುವಂತಿಲ್ಲ.

ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

ಒಂದು ವೇಳೆ ನಿಯಮ ಮೀರಿದರೆ ಅಂತವರನ್ನು ಅರೆಸ್ಟ್ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಲಸಾಗುವುದು ಎಂದು ಪಂತ್ ಎಚ್ಚರಿಕೆ ಕೊಟ್ಟಿದ್ದಾರೆ.

ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವುದರಿಂದ ನಾಳೆ (ಬುಧವಾರ) ಬಸ್ ಸಂಚಾರದಲ್ಲಿ ವ್ಯತ್ಯಾಯವಾಗುವ ಸಾಧ್ಯತೆಗಳಿವೆ.

ಇನ್ನು ರಾಜ್ಯದಲ್ಲಿ ನಾಳೆ ಸಾರಿಗೆ ನೌಕರರ ಮುಷ್ಕರ ಘೋಷಿಸಿದ ಬೆನ್ನಲ್ಲೇ ಅಧಿಕಾರಿಗಳ ಜತೆ ಬಿಎಂಟಿಸಿ ಎಂಡಿ ಸಿ.ಶಿಖಾ ಸಭೆ ನಡೆಸುತ್ತಿದ್ದಾರೆ. ಖಾಸಗಿ ಬಸ್ ಸಂಚಾರದ ಬಗ್ಗೆ ಹಾಗೂ ಯಾವ ಮಾರ್ಗದಲ್ಲಿ ಎಷ್ಟು ಬಸ್ ಸಂಚರಿಸಬೇಕು? ಯಾವ ಮಾರ್ಗಕ್ಕೆ ಹೆಚ್ಚು ಬಸ್‌ಗಳ ಅಗತ್ಯವಿದೆ? ಎನ್ನುವ ಮಾಹಿತಿ ಕಲೆಹಾಕುತ್ತಿದ್ದಾರೆ.

click me!