ಅಮೂಲ್ಯ ಲಿಯೋನಾ ಬಂಧನ ಅವಧಿ ವಿಸ್ತರಣೆ

Kannadaprabha News   | Asianet News
Published : Mar 06, 2020, 08:11 AM IST
ಅಮೂಲ್ಯ ಲಿಯೋನಾ  ಬಂಧನ ಅವಧಿ ವಿಸ್ತರಣೆ

ಸಾರಾಂಶ

ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ ಅಮೂಲ್ಯ ಲಿಯೋನಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. 15 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. 

ಬೆಂಗಳೂರು [ಮಾ.06]:  ಪಾಕ್‌ ಪರ ಘೋಷಣೆ ಕೂಗಿ ಬಂಧಿತಳಾಗಿರುವ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾಳ ನ್ಯಾಯಾಂಗ ಬಂಧನವನ್ನು 15 ದಿನಗಳ ಕಾಲ ವಿಸ್ತರಿಸಿ ನಗರದ 5ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಮೂಲ್ಯಳನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು, ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿದರು. 

ವಿಚಾರಣೆ ವೇಳೆ ಮತ್ತೊಂದು ಸತ್ಯ ಬಾಯ್ಬಿಟ್ಟ ಅಮೂಲ್ಯ...

ಫೆ. 26ರಂದು ಉಪ್ಪಾರಪೇಟೆ ಠಾಣೆ ಪೊಲೀಸರು ಅಮೂಲ್ಯಳನ್ನು 4 ದಿನದ ಅವಧಿಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ನ್ಯಾಯಾಲವು 5 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಮತ್ತೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ ಎಂದರು.

PREV
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!