ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಇನ್ನಿಲ್ಲ!

Published : May 04, 2021, 10:53 AM ISTUpdated : May 04, 2021, 01:32 PM IST
ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಇನ್ನಿಲ್ಲ!

ಸಾರಾಂಶ

ಹಿರಿಯ ಪತ್ರಕರ್ತ ಕೊರೋನಾಗೆ ಬಲಿ| ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (56) ನಿಧನ| ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

ಮಂಗಳೂರು(ಮೇ.04): ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿದ್ದ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (56) ನಿಧನರಾಗಿದ್ದಾರೆ.

ಅಲ್ಪಕಾಲದ ಅನಾರೋಗ್ಯದಿಂದ(ಕೋವಿಡ್) ಬಳಲುತ್ತಿದ್ದ ಸುರೇಂದ್ರ ಶೆಟ್ಟಿ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಿರಿಯ ಪತ್ರಕರ್ತರಾಗಿದ್ದ ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯ ಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. 

ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನಕ್ಕೆ ಡಿಸಿಎಂ ಕಂಬನಿ
*
ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಕಂಬನಿ ಮಿಡಿದಿದ್ದಾರೆ.

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೊ ಮುಖ್ಯಸ್ಥರಾಗಿದ್ದ ಸುರೇಂದ್ರ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರವಾಯಿತು. ಸೌಮ್ಯ ಸ್ವಭಾವದ ಶೆಟ್ಟರು, ಅತ್ಯುತ್ತಮ ಪತ್ರಕರ್ತರಾಗಿದ್ದರು ಮಾತ್ರವಲ್ಲ ʼಮುಂಗಾರುʼ, ʼಸಂಯುಕ್ತ ಕರ್ನಾಟಕʼ, ಕನ್ನಡಪ್ರಭʼ, ʼವಿಜಯ ಕರ್ನಾಟಕʼ, ʼವಾರ್ತಾ ಭಾರತಿʼ ಮತ್ತಿತರೆ ಪತ್ರಿಕೆಗಳಲ್ಲಿ ಕೆಲಸ ಮಾಡಿ ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು.

ಮೃತರ ಅಗಲಿಕೆಯನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅವರ ಸಹಪಾಠಿಗಳಿಗೆ ಆ ಭಗವಂತ ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು