ಬೆಂಗ್ಳೂರಲ್ಲಿ ಪ್ರವಾಹ ಮುನ್ಸೂಚನೆ ಪಡೆಯಲು ರಾಜಕಾಲುವೆಗೆ ಸೆನ್ಸ‌ರ್ ಅಳವಡಿಕೆ

Published : May 11, 2024, 09:12 AM IST
ಬೆಂಗ್ಳೂರಲ್ಲಿ ಪ್ರವಾಹ ಮುನ್ಸೂಚನೆ ಪಡೆಯಲು ರಾಜಕಾಲುವೆಗೆ ಸೆನ್ಸ‌ರ್ ಅಳವಡಿಕೆ

ಸಾರಾಂಶ

ಮುಂಗಾರು ಮಳೆ ಆರಂಭಕ್ಕೂ ಮುನ್ನ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಸೆನ್ಸ‌ರ್‌ಗಳ ಅಳವಡಿಕೆಯಿಂದ ರಾಜಕಾಲುವೆಗಳ ನೀರಿನ ಮಟ್ಟವನ್ನು ಅಂತರ್ಜಾಲದ ಮೂಲಕ ಕೆಎಸ್ ನಿಯಂತ್ರಣ ಕೊಠಡಿಗೆ ರವಾನಿಸಲಾಗುತ್ತದೆ. ನಿಯಂತ್ರಣ ಕೊಠಡಿಯಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯುವಂತಹ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.   

ಬೆಂಗಳೂರು(ಮೇ.11):  ಮಳೆ ಬಂದಾಗ ನಗರದಲ್ಲಿ ಪ್ರವಾಹ ಉಂಟಾಗುವುದನ್ನು ಮೊದಲೇ ತಿಳಿಯಲು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಹಯೋಗದಲ್ಲಿ ರಾಜಕಾಲುವೆಗಳ 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕ ಅಳವಡಿಸಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಅವಘಡ ತಪ್ಪಿಸಲು ತಡೆಯಲು ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ. 

ಮುಂಗಾರು ಮಳೆ ಆರಂಭಕ್ಕೂ ಮುನ್ನ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಸೆನ್ಸ‌ರ್‌ಗಳ ಅಳವಡಿಕೆಯಿಂದ ರಾಜಕಾಲುವೆಗಳ ನೀರಿನ ಮಟ್ಟವನ್ನು ಅಂತರ್ಜಾಲದ ಮೂಲಕ ಕೆಎಸ್ ನಿಯಂತ್ರಣ ಕೊಠಡಿಗೆ ರವಾನಿಸಲಾಗುತ್ತದೆ. ನಿಯಂತ್ರಣ ಕೊಠಡಿಯಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯುವಂತಹ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. 

ಚರಂಡಿ, ರಾಜಕಾಲುವೆ ಸ್ವಚ್ಛತೆಗೆ 5 ದಿನ ಡೆಡ್‌ಲೈನ್‌: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ

ರಾಜಕಾಲುವೆ ನೀರಿನ ಮಟ್ಟದ ಪ್ರಮಾಣ ಹಸಿರು ಮತ್ತು ನೀಲಿ ಬಣ್ಣದಲ್ಲಿದ್ದರೆ ಅಪಾಯವಿಲ್ಲ. ನೀರಿನ ಮಟ್ಟ ಕೆಂಪು ಬಣ್ಣವಿದ್ದರೆ ಅಪಾಯ ಮತ್ತು ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಅದರ ಆಧಾರದಲ್ಲಿ ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳು ಬಿಬಿಎಂಪಿಗೆ ಮಾಹಿತಿ ನೀಡಲಿದ್ದಾರೆ. 

ಈ ಮಾಹಿತಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳು ಪ್ರವಾಹ ಉಂಟಾಗುವ ಸ್ಥಳಗಳಲ್ಲಿನ ನಿವಾಸಿಗಳನ್ನು ಬೇರೆಡೆ ತೆರಳಲು ಅಥವಾ ಸುರಕ್ಷತಾ ಕ್ರಮ ಕೈಗೊ ಳ್ಳಲು ನಿರ್ಧರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

PREV
Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ