ಬೆಂಗಳೂರಲ್ಲಿ ಕೊರೋನಾ ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ

By Kannadaprabha NewsFirst Published Mar 13, 2020, 10:27 AM IST
Highlights

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 300-350 ಹಾಸಿಗೆಗಳ ಆಸ್ಪತ್ರೆಯನ್ನು ಸಂಪೂರ್ಣ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿಯೇ ಮೀಸಲಿಡಲು ವೈದ್ಯಕೀಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಬೆಂಗಳೂರು[ಮಾ.13]: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 300-350 ಹಾಸಿಗೆಗಳ ಆಸ್ಪತ್ರೆಯನ್ನು ಸಂಪೂರ್ಣ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿಯೇ ಮೀಸಲಿಡಲು ವೈದ್ಯಕೀಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಡಾ.ಕೆ. ಸುಧಾಕರ್, ಕೊರೋನಾ ಸೋಂಕಿತರಿಂದ ಸೋಂಕು ಬೇರೆಯವರಿಗೆ ಹರಡದಂತೆ ನಿಯಂತ್ರಿಸಲು ಹಾಗೂ ಸೋಂಕಿತರಿಗೆ
ಗುಣಮಟ್ಟದ ಚಿಕಿತ್ಸೆ ನೀಡಲು ಬೆಂಗಳೂರಿನಲ್ಲಿ ಒಂದು ಆಸ್ಪತ್ರೆ ಯನ್ನೇ ಕೊರೋನಾ ಸೋಂಕಿಗೆ ಮೀಸಲಿಡಲು ಚಿಂತನೆ ನಡೆಸಿದ್ದೇವೆ.

ಕರ್ನಾಟಕದ ನಕ್ಸಲ್‌ ಶ್ರೀಮತಿಗೆ 15 ದಿನ ನ್ಯಾಯಾಂಗ ಬಂಧನ

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರೊಂದಿಗೆ ಚರ್ಚಿಸಿದ್ದು, ಪಂಕಜ್‌ಕುಮಾರ್ ಪಾಂಡೆ ಹಾಗೂ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕ ಡಾ.ಸಿ. ನಾಗರಾಜ್ ಅವರು ಶುಕ್ರವಾರ ಆಸ್ಪತ್ರೆ ಪರಿಶೀಲನೆ ಮಾಡಿ ಕೊಂಡುಬರುತ್ತಾರೆ. ಆಸ್ಪತ್ರೆಯ ಹೆಸರು ಅಂತಿಮಗೊಂಡ ಬಳಿಕ ಅಲ್ಲಿನ ಸಾಮಾನ್ಯ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು.

ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಎಲ್ಲಾ ವೈದ್ಯಕೀಯ ವ್ಯವಸ್ಥೆ ಮಾಡಲಾಗುವುದು. ಆಸ್ಪತ್ರೆಯ ಹೆಸರು ಹಾಗೂ
ಮಾಹಿತಿಯನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಲಾಗುವುದು ಎಂದು ಡಾ.ಕೆ. ಸುಧಾಕರ್ ಹೇಳಿದರು.

click me!