ಬೆಂಗ್ಳೂರು ಪೊಲೀಸರನ್ನು ಬೆಂಬಿಡದೆ ಕಾಡುತ್ತಿರೋ ಕೊರೋನಾ: ಕೊನೆಗೂ ಎಚ್ಚೆತ್ತ ಸರ್ಕಾರ

By Suvarna NewsFirst Published Jun 23, 2020, 5:31 PM IST
Highlights

ಮಾರಕ ಕೊರೋನಾ ವೈರಸ್ ಬೆಂಗಳೂರು ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಬೆಂಗಳೂರು, (ಜೂನ್.23): ನಗರದಲ್ಲಿ ಪೊಲೀಸರಿಗೆ ಕೊರೋನಾ ವೈರಸ್ ಸೋಂಕು ತಗುಲುತ್ತಿದ್ದು, ಠಾಣೆಗಳು ಸೀಲ್ ಡೌನ್ ಆಗುತ್ತಿವೆ. 

ಅಲ್ಲದೇ ಕೊರೋನಾ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸುತ್ತಿರು ಪೊಲೀಸರು ಮಾಹಾಮಾರಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ಪೊಲೀಸರಿಗಾಗಿಯೇ ಪ್ರತ್ಯೇಕ ಆಸ್ಪತ್ರೆ ಗುರುತಿಸಿದೆ.

ಖಾಕಿ ಕೋಟೆಗೂ ಕಾಲಿಟ್ಟ ಕೊರೊನಾ: 125 ಪೊಲೀಸರಿಗೆ ಸೋಂಕು

ಪೊಲೀಸರಿಗೆ ಪ್ರತ್ಯೇಕ ಆಸ್ಪತ್ರೆಗಳು, ಪರೀಕ್ಷಾ ಲ್ಯಾಬ್ ವ್ಯವಸ್ಥೆಗೊಳಿಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು (ಮಂಗಳವಾರ) ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವರು ಹೊರಡಿಸಿರುವ ಆದೇಶ

1. ಬೆಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿಗಾಗಿ 5 ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಪಾಸಿಟಿವ್ ರೋಗಿಗಳಿಗೆ ಕಾಯ್ದಿರಿಸುವುದು..
2. ಬೆಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿಗಾಗಿ ಪ್ರತ್ಯೇಕವಾಗಿ ಒಂದು ಕೋವಿಡ್ ಪರೀಕ್ಷಾ ಪ್ರಯೋಗಾಲಯ ಮೀಸಲು.
3. ಗಂಟಲು ದ್ರವ ಸಂಗ್ರಹಿಸಲು ಸಂಚಾರಿ ವಾಹನವನ್ನು ಕಾಯ್ದಿರಿಸುವುದು..
4. ಆಸ್ಪತ್ರೆಯಲ್ಲಿ ದಾಖಲಾಗಿರುವ ಪೊಲೀಸ್ ಸಿಬ್ಬಂದಿಗಳಿಗೆ ಉತ್ತಮವಾದ ಊಟ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು. 
5. ಪ್ರತ್ಯೇಕವಾಗಿ ಪೊಲೀಸ್ ಸಿಬ್ಬಂದಿಗಾಗಿ ಒಂದು ಕ್ವಾರಂಟೈನ್ ಸೆಂಟರ್ ನಿಗದಿ..
6. ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಆಂಬುಲೆನ್ಸ್ ವ್ಯವಸ್ಥೆ

ಪೊಲೀಸರ ಬೆನ್ನು ಬಿದ್ದ ಕೊರೋನಾ ಓಡಿಸಲು ಬಸವರಾಜ ಬೊಮ್ಮಾಯಿ ಅಸ್ತ್ರ!

ಇಷ್ಟು ವ್ಯವಸ್ಥೆಯನ್ನು ಮಾಡುವಂತೆ ಸಚಿವ ಬಸವರಾಜ್ ಬೊಮ್ಮಾಯಿ ಹೊರಡಿಸಿದ ಆದೇಶದ ಪ್ರತಿಯಲ್ಲಿದೆ. ಮಾರಕ ಕೊರೋನಾ ವೈರಸ್ ಬೆಂಗಳೂರು ಪೊಲೀಸರನ್ನು ಬೆಂಬಿಡದೆ ಕಾಡುತ್ತಿದ್ದು, ಈವರೆಗೆ ಒಟ್ಟು 75 ಪೊಲೀಸರಿಗೆ ಸೋಂಕು ತಗುಲಿರುವುದು ದೃಢಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಕೊರೋನಾ ವಾರಿಯರ್ಸ್​ ಆಗಿರುವ ಪೊಲೀಸ್ ಸಿಬ್ಬಂದಿ ಸೋಂಕು ಮಣಿಸುವ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮೂಲಕ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

click me!