ಹೊಸ ವರ್ಷದಂದೆ ಹಾರಾಡಿತು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜ

By Web DeskFirst Published Jan 1, 2019, 9:56 PM IST
Highlights

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಮತ್ತು ಕೂಗು ಆಗಾಗ ಕೇಳಿ ಬರುತ್ತಿರುವಾಗಲೆ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಸಹ ನಡೆದು ಹೋಗಿದೆ.

ಬೆಳಗಾವಿ[ಜ.01]  ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣವಾಗಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಧ್ವಜಾರೋಹಣ ನಡೆದಿದೆ.

ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಅಡಿವೇಶ ಇಟಗಿ ನೇತೃತ್ವದಲ್ಲಿ ಧ್ವಜಾರೋಹಣ ಮಾಡಲಾಗಿದ್ದು ಉತ್ತರ ಕರ್ನಾಟಕ ನಿರ್ಲಕ್ಷ ಖಂಡಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಿದ್ದೇವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಸೈಲಂಟಾಗೇ ಎಂಬಿ ಪಾಟೀಲ್ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದು ಹೀಗೆ!

ಅಲ್ಲದೇ ಬಾಗಲಕೋಟೆ ಜಿಲ್ಲೆ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ  ಮಾಡಲಾಗಿತ್ತು.

ಮಧೋಳದಲ್ಲಿನ ಹೋರಾಟಗಾರರು ಪ್ರತ್ಯೇಕ ರಾಜ್ಯಕ್ಕಾಗಿ ಕನ್ನಡ ಧ್ವಜ ಬಿಟ್ಟು ಬೇರೆ ಧ್ವಜ ನಿರ್ಮಿಸಿ ಧ್ವಜಾರೋಹಣ ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ ಈ ಕಾರ್ಯಕ್ರಮ ನಡೆದಿದೆ.

click me!